ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಬಿಜೆಪಿಗೆ ಸೇರ್ಪಡೆ

Published 4 ಮೇ 2024, 11:35 IST
Last Updated 4 ಮೇ 2024, 11:35 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ದೆಹಲಿ ಘಟಕದ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡರು.

ಮಾಜಿ ಸಚಿವ ರಾಜ್‌ಕುಮಾರ್‌ ಚೌಹಾಣ್‌, ಮಾಜಿ ಶಾಸಕರಾದ ನೀರಜ್‌ ಬಸೋಯ ಮತ್ತು ನಸೀಬ್‌ ಸಿಂಗ್‌ ಅವರೂ ಅರವಿಂದರ್‌ ಜತೆಗೆ ಬಿಜೆಪಿಗೆ ಸೇರಿದರು.

ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಈ ನಾಲ್ವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಎಎಪಿಯ ಜೊತೆಗೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಅರವಿಂದರ್ ಅವರು ಕಾಂಗ್ರೆಸ್‌ ದೆಹಲಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದ್ದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT