‘ನಾನು ಬಲಶಾಲಿ ಅಲ್ಲ, ತುಂಬಾ ಬಲಹೀನ ಆಗುತ್ತಿದ್ದೇನೆ ಎನ್ನುವುದು ಗೊತ್ತಾಗಿರುವುದರಿಂದಲೇ ಮಹಾಪ್ರಭುವಿನ ಮುಖದಲ್ಲಿ ಆತಂಕ ಗೋಚರಿಸುತ್ತಿದೆ’ ಎಂದು ಚಿತ್ರ ನಟ ಪ್ರಕಾಶ್ ರಾಜ್ ಟೀಕಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಅಂಗವಾಗಿ ‘ಭಾರತ- ಸಂವಿಧಾನ-ಪ್ರಜಾಪ್ರಭುತ್ವದ ಉಳಿವಿಗಾಗಿ’ ಘೋಷವಾಕ್ಯದಡಿ ದಲಿತ ಸಂಘರ್ಷ ಸಮಿತಿಯಿಂದ ಮೈಸೂರಿನ ಎಂ.ಜಿ. ರಸ್ತೆಯ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘400 ಸ್ಥಾನ ಗಳಿಸುತ್ತೇವೆ ಎನ್ನುತ್ತಾರೆ. ಅದು ಅವರ ನಂಬಿಕೆ ಅಲ್ಲ, ಭಯ. ತುಂಬಾ ವಿಶ್ವಾಸದಿಂದ ಮಾತನಾಡಿದಾಗ, ಪ್ರಶ್ನಿಸುವವರನ್ನು ಜೈಲಿಗೆ ಕಳುಹಿಸಿದಾಗ, ಇಡಿಯಿಂದ ದಾಳಿ ಮಾಡಿಸಿದಾಗ ಅವರು ಹೆದರಿದ್ದಾರೆ ಎನ್ನುವುದು ಗೊತ್ತಾಗುತ್ತದೆ’ ಎಂದು ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.