ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

LS Result 2024 |ಫಲಿತಾಂಶ, ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸುತ್ತೇವೆ: ಖರ್ಗೆ

Published 5 ಜೂನ್ 2024, 7:58 IST
Last Updated 5 ಜೂನ್ 2024, 7:58 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಚುನಾವಣಾ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲು ಇಂದು ಸಂಜೆ ‘ಇಂಡಿಯಾ’ ಮೈತ್ರಿಕೂಟದ ಸಭೆ ಕರೆಯಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಇಂಡಿಯಾ’ ಬಣದ ನಾಯಕರು ಇಂದು ಸಂಜೆ 6 ಗಂಟೆಗೆ ರಾಜಾಜಿ ಮಾರ್ಗದಲ್ಲಿರುವ ಕಚೇರಿಯಲ್ಲಿ ಸಭೆ ನಡೆಸಲಿದ್ದು, ಚುನಾವಣಾ ಫಲಿತಾಂಶ ಮತ್ತು ನಂತರದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸುತ್ತೇವೆ’ ಎಂದು ತಿಳಿಸಿದ್ದಾರೆ.

ಲೋಕಸಭೆಗೆ ಏಪ್ರಿಲ್ 19ರಿಂದ ಜೂನ್ 1ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಜೂನ್‌ 4 (ಮಂಗಳವಾರ) ಫಲಿತಾಂಶ ಹೊರಬಿದ್ದಿದೆ. 543 ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಹಾಗೂ 'ಇಂಡಿಯಾ' ಮೈತ್ರಿಕೂಟ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಸರ್ಕಾರ ರಚಿಸುವ ಸಂಬಂಧ ಎರಡೂ ಬಣಗಳ ನಾಯಕರು ಇಂದು ಸಭೆ ಸೇರಲಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದ ಯಶ ಸಾಧಿಸದಿದ್ದರೂ ಭಾರತೀಯ ಜನತಾ ಪಕ್ಷ (ಬಿಜೆಪಿ) 240 ಸ್ಥಾನಗಳಲ್ಲಿ ಗೆಲುವಿನೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಬಾರಿಗಿಂತಲೂ ಗಮನಾರ್ಹ ಸಾಧನೆ ಮಾಡಿರುವ ಕಾಂಗ್ರೆಸ್, 99 ಸ್ಥಾನಗಳೊಂದಿಗೆ ನಂತರದ ಸ್ಥಾನದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT