ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Election Results 2024 Live| 3ನೇ ಬಾರಿ NDA ಗೆಲ್ಲಿಸಿದ್ದಕ್ಕೆ ಧನ್ಯವಾದ: ಮೋದಿ

Published 4 ಜೂನ್ 2024, 2:02 IST
Last Updated 4 ಜೂನ್ 2024, 16:18 IST
ಅಕ್ಷರ ಗಾತ್ರ
ಪ್ರಮುಖ ಘಟನೆಗಳು
06:0404 Jun 2024

LS Results: ನಿರೀಕ್ಷಿತ ಫಲಿತಾಂಶ ಬರದಿದ್ದರೆ INDIA ಬಣದಿಂದ ರಾಷ್ಟ್ರಪತಿ ಭೇಟಿ?

06:5804 Jun 2024

ಇಂದೋರ್‌ನಲ್ಲಿ ಅತಿಹೆಚ್ಚು 'ನೋಟಾ' ಪ್ರಯೋಗ

08:0904 Jun 2024

ಉತ್ತರ ಪ್ರದೇಶ: ರಾಹುಲ್‌ ಗಾಂಧಿಗೆ 1.5ಲಕ್ಷ; PM ಮೋದಿಗೆ 60 ಸಾವಿರ ಮತಗಳ ಮುನ್ನಡೆ

01:4604 Jun 2024

ಮತ ಎಣಿಕೆಗೆ ಕ್ಷಣಗಣನೆ ಕ್ಷಣಗಣನೆ

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಪಿಟಿಐ ಚಿತ್ರಗಳು

ಲೋಕಸಭಾ ಚುನಾವಣೆಯ ಮತ ಎಣಿಕೆ ಇಂದು (ಜೂನ್‌ 4ರ) ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃ‌ತ್ವದ ಎನ್‌ಡಿಎ ‘ಹ್ಯಾಟ್ರಿಕ್‌‘ ಗೆಲುವಿನ ವಿಶ್ವಾಸದಲ್ಲಿದ್ದರೆ, ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಅಚ್ಚರಿಯ ಫಲಿತಾಂಶದ ನಿರೀಕ್ಷೆಯಲ್ಲಿದೆ.‌

ಬಿಜೆಪಿಯು ಅಧಿಕಾರವನ್ನು ಉಳಿಸಿಕೊಂಡರೆ ಮೋದಿ ಅವರು ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ದಾಖಲೆ ಸರಿಗಟ್ಟಲಿದ್ದಾರೆ. ನೆಹರೂ ತಮ್ಮ ಪಕ್ಷವನ್ನು ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದರು.

02:0304 Jun 2024

ಲೋಕಸಭೆ ಚುನಾವಣೆ: ಹ್ಯಾಟ್ರಿಕ್‌ ಗೆಲುವೊ, ಅಚ್ಚರಿ ಫಲಿತವೊ?

02:0404 Jun 2024

ಕರ್ನಾಟಕದ 28 ಕ್ಷೇತ್ರಗಳ ಕುತೂಹಲಕ್ಕೆ ಇಂದು ತೆರೆ

02:0604 Jun 2024

12 ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ‘ಹ್ಯಾಟ್ರಿಕ್‌‘ ಗೆಲುವಿನ ವಿಶ್ವಾಸದಲ್ಲಿದ್ದರೆ, ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಅಚ್ಚರಿಯ ಫಲಿತಾಂಶದ ನಿರೀಕ್ಷೆಯಲ್ಲಿದೆ.

02:4704 Jun 2024

ಮತ ಎಣಿಕೆ ಆರಂಭ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ

–ಪ್ರಜಾವಾಣಿ ಚಿತ್ರ

ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ.

02:5404 Jun 2024
02:5504 Jun 2024
03:1704 Jun 2024

ಪಾರದರ್ಶಕತೆ ಕಾಯ್ದುಕೊಳ್ಳಿ: ಸಿಇಸಿ ರಾಜೀವ್‌ ಕುಮಾರ್‌

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಪಿಟಿಐ

'ಎಲ್ಲ ಕ್ಷೇತ್ರಗಳಲ್ಲೂ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ನಿಯಮಾನುಸಾರವಾಗಿ ಮತ್ತು ಪಾರದರ್ಶಕವಾಗಿ ಎಣಿಕೆ ಕಾರ್ಯ ನಡೆಯುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು ಮತ್ತು ಚುನಾವಣಾ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದೇವೆ' ಎಂದು ಮುಖ್ಯ ಚುನಾವಣಾ ಆಯುಕ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

03:2004 Jun 2024

ಎನ್‌ಡಿಎಗೆ ಮುನ್ನಡೆ

ಆರಂಭಿಕ ಹಂತದ ಮತ ಎಣಿಕೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಎನ್‌ಡಿಎ ಅಭ್ಯರ್ಥಿಗಳು 323 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಬಣದ ಅಭ್ಯರ್ಥಿಗಳು 138 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

03:2404 Jun 2024

ಚುನಾವಣಾ ಆಯೋಗದ ಮಾಹಿತಿ