ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧೀರ್ ವಿಡಿಯೊ ತಿರುಚಲಾಗಿದೆ: ಪೊಲೀಸ್

Published 3 ಮೇ 2024, 16:13 IST
Last Updated 3 ಮೇ 2024, 16:13 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ‘ಬಿಜೆಪಿಗೆ ಮತ ಚಲಾಯಿಸಿ’ ಎಂದು ಹೇಳಿರುವ ವಿಡಿಯೊವನ್ನು ತಿರುಚಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

‘ವಿಡಿಯೊದ ಒಂದು ಭಾಗವನ್ನು ತಿರುಚಿ, ಹರಡಲಾಗಿದೆ ಎಂಬುದನ್ನು ನಮ್ಮ ಸೈಬರ್ ತಂಡವು ಕಂಡುಕೊಂಡಿದೆ. ಚುನಾವಣಾ ಸಮಯದಲ್ಲಿ ರಾಜಕೀಯ ಲಾಭ ಪಡೆಯುವ ದೃಷ್ಟಿಯಿಂದ ಪ್ರಾಯಶಃ ಇದನ್ನು ಮಾಡಲಾಗಿದೆ. ಈ ಸಂಬಂಧ ನಾವು ಜಂಗೀಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದೇವೆ’ ಎಂದು ತಿಳಿಸಿದ್ದಾರೆ.

ವಿಡಿಯೊ ಬಗ್ಗೆ ಕಾಂಗ್ರೆಸ್‌ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ ಅದು ತಿರುಚಿದ ವಿಡಿಯೊ ಎಂದು ತಿಳಿಸಿದ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಧನ್ಯವಾದ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT