ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಂಥಾ ಮಾತು!

Published 25 ಮೇ 2024, 0:46 IST
Last Updated 25 ಮೇ 2024, 0:46 IST
ಅಕ್ಷರ ಗಾತ್ರ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಪರವಾಗಿ ಚುನಾವಣಾ ಪ್ರಚಾರ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರಿಗೆ ಸ್ಪಷ್ಟನೆ ನೀಡಬೇಕು. ಪ್ರಜ್ವಲ್‌ ವಿರುದ್ಧದ ಆರೋಪಗಳ ಬಗ್ಗೆ ತಿಳಿದಿದ್ದರೂ, ರಾಜಕೀಯ ಲಾಭಕ್ಕಾಗಿ ಬಿಜೆಪಿಯು ಅದನ್ನು ಗಣನೆಗೆ ತೆಗೆದುಕೊಂಡಿಲ್ಲ. ಪಾಕ್‌ ಆಕ್ರಮಿತ ಕಾಶ್ಮೀರವನ್ನು ಮರಳಿ ವಶಕ್ಕೆ ಪಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ಅವರು ಏನು ಮಾಡುತ್ತಿದ್ದರು? ನಮ್ಮ ಹಲವು ಗಡಿ ಠಾಣೆಗಳನ್ನು ಚೀನಾ ವಶಪಡಿಸಿಕೊಂಡಿದೆ. ಆದರೆ, ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿದೆ

-ಶಶಿ ತರೂರ್, ಕಾಂಗ್ರೆಸ್‌ ಮುಖಂಡ

ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಪಿಟಿಐ ಚಿತ್ರ

ಕಾಂಗ್ರೆಸ್‌ ಪಕ್ಷವು ಜಾರ್ಖಂಡ್‌ ಅನ್ನು ‘ಭ್ರಷ್ಟಾಚಾರದ ಎಟಿಎಂ’ ಆಗಿ ನೋಡುತ್ತಿದೆ. ಕಾಂಗ್ರೆಸ್‌ ಮತ್ತು ಹೇಮಂತ್‌ ಸೊರೇನ್‌ ಅವರ ಜೆಎಂಎಂ ಆ ರಾಜ್ಯದಲ್ಲಿ ಭಷ್ಟಾಚಾರ ಮಾಡಲು ಪೈಪೋಟಿಗಿಳಿದಿವೆ. ಹೇಮಂತ್‌ ಸೊರೇನ್‌ ಸೇರಿದಂತೆ ಜೆಎಂಎಂನ ಭ್ರಷ್ಟ ಮುಖಂಡರು ಕಾಂಗ್ರೆಸ್‌ನ ತೊಡೆಯಲ್ಲಿ ಕೂತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ನಕ್ಸಲರಿಂದ ರಕ್ಷಿಸಿದ್ದಾರೆ ಮತ್ತು ಬುಡಕಟ್ಟು ಜನರಿಗೆ ನ್ಯಾಯ ಒದಗಿಸಿದ್ದಾರೆ 

-ಅಮಿತ್‌ ಶಾ, ಕೇಂದ್ರ ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT