ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇದ್ದ ವೇದಿಕೆ ಕುಸಿತ: ಕಾರ್ಯಕರ್ತರಲ್ಲಿ ಆತಂಕ

Published 27 ಮೇ 2024, 11:36 IST
Last Updated 27 ಮೇ 2024, 11:36 IST
ಅಕ್ಷರ ಗಾತ್ರ

ಪಾಲಿಗಂಜ್ (ಬಿಹಾರ): ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಪರ ಮತಯಾಚನೆ ಮಾಡಲು ರಾಹುಲ್‌ ಗಾಂಧಿ ಪಟ್ನಾಕ್ಕೆ ಬಂದಿದ್ದರು.

ಪಾಲಿಗಂಜ್ ಪ್ರದೇಶದಲ್ಲಿ ಆಯೋಜಿಸಿದ್ದ ಚುನಾವಣಾ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಭಾಗವಹಿಸಿದ್ದರು. ಅವರು ವೇದಿಕೆ ಮೇಲೆ ಬರುತ್ತಿದ್ದಂತೆಯೇ ವೇದಿಕೆಯ ಒಂದು ಭಾಗ ಏಕಾಏಕಿ ಕುಸಿದಿದೆ. ಕೂಡಲೇ ಎಚ್ಚೆತ್ತ ಭಾರತಿ ಅವರು ರಾಹುಲ್‌ ಕೈಯನ್ನು ಹಿಡಿದುಕೊಂಡು ಪಕ್ಕಕ್ಕೆ ಕರೆದುಕೊಂಡು ಹೋಗಿದ್ದಾರೆ. ಜತೆಗೆ ಭದ್ರತಾ ಸಿಬ್ಬಂದಿಯು ರಾಹುಲ್‌ ನೆರವಿಗೆ ಧಾವಿಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಲೋಕಸಭೆ ಚುನಾವಣೆಗೆ ಏಳನೇ ಮತ್ತು ಕೊನೆಯ ಹಂತದ ಮತದಾನ ಜೂನ್‌ 1ರಂದು ನಡೆಯಲಿದೆ. ಜೂನ್‌ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT