ಭಾನುವಾರ, 2 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಪುರಿ ಜಗನ್ನಾಥ ದೇವಾಲಯ ಸುರಕ್ಷಿತವಾಗಿಲ್ಲ: ಪ್ರಧಾನಿ ಮೋದಿ ಕಳವಳ

Published 20 ಮೇ 2024, 6:17 IST
Last Updated 20 ಮೇ 2024, 6:17 IST
ಅಕ್ಷರ ಗಾತ್ರ

ಪುರಿ: ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯ ಸುರಕ್ಷಿತವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ ನಿಮಿತ್ತ ಒಡಿಶಾದ ಅಂಗುಲ್‌ ಪಟ್ಟಣದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡ ಮೋದಿ, ಬಿಜು ಜನತಾ ದಳ (ಬಿಜೆಡಿ) ಪಕ್ಷದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದೇವಾಲಯದ ಗರ್ಭಗುಡಿಯ ಪಕ್ಕದಲ್ಲಿರುವ 'ರತ್ನ ಭಂಡಾರ'ದ ಕೀಲಿಕೈ ಕಳೆದ ಆರು ವರ್ಷಗಳಿಂದ ಕಾಣೆಯಾಗಿದೆ ಎಂದು ಆರೋಪಿಸಿದ್ದಾರೆ.

ಭಕ್ತರು ನೀಡಿದ ಅಮೂಲ್ಯ ಚಿನ್ನಾಭರಣಗಳನ್ನು ಇಡಲಾಗಿರುವ ಕೋಣೆಗಳು ರತ್ನ ಭಂಡಾರದಲ್ಲಿವೆ.

5ನೇ ಹಂತದ ಮತದಾನ

ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಒಡಿಶಾದ 5 ಕ್ಷೇತ್ರಗಳೂ ಸೇರಿದಂತೆ 6 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT