ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Lok Sabha Elections 2024 | ಕೊನೆಯ ಹಂತದ ಮತದಾನ ಆರಂಭ: ಜನರು ಉತ್ಸಾಹದಿಂದ ಭಾಗಿ

Published 1 ಜೂನ್ 2024, 2:27 IST
Last Updated 1 ಜೂನ್ 2024, 2:27 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತದ ಮತದಾನ ಇಂದು (ಶನಿವಾರ) ಬೆಳಗ್ಗೆ 7 ಗಂಟೆಯಿಂದ  ಆರಂಭವಾಗಿದ್ದು ಜನರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆಯ 57 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಣದಲ್ಲಿರುವ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಲ್ಲೂ ಇಂದು ಮತದಾನ ನಡೆಯುತ್ತಿದೆ.

ಪಂಜಾಬ್‌ನ ಎಲ್ಲ 13 ಮತ್ತು ಹಿಮಾಚಲ ಪ್ರದೇಶದ ಎಲ್ಲ ನಾಲ್ಕು ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. ಒಡಿಶಾದ ಆರು ಲೋಕಸಭಾ ಕ್ಷೇತ್ರಗಳ ಜೊತೆಗೆ ವಿಧಾನಸಭೆಯ 42 ಸ್ಥಾನಗಳಿಗೂ ಮತದಾನ ನಡೆಯುತ್ತಿದೆ.

ಶನಿವಾರದ ಮತದಾನ ಪೂರ್ಣಗೊಂಡರೆ ಏಪ್ರಿಲ್‌ 19ರಂದು ಪ್ರಾರಂಭವಾದ 7 ಹಂತಗಳ ಮತದಾನದ ಪ್ರಕ್ರಿಯೆಗೆ ತೆರೆಬೀಳಲಿದೆ. ಇದುವರೆಗಿನ ಆರು ಹಂತಗಳಲ್ಲಿ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 486 ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಂಡಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಗಳಿಗೂ ಮತದಾನ ನಡೆದಿದೆ. ಇದೀಗ ಎಲ್ಲರ ಚಿತ್ತ ಜೂನ್‌ 4ರಂದು ನಡೆಯಲಿರುವ ಮತಎಣಿಕೆಯತ್ತ ನೆಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT