ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Election Result Trend: 3ನೇ ಬಾರಿ PM ಆಗುವತ್ತ ಮೋದಿ; ವಿಪಕ್ಷಗಳಿಗೂ ಭಾರೀ ಲಾಭ

Published 4 ಜೂನ್ 2024, 6:48 IST
Last Updated 4 ಜೂನ್ 2024, 6:48 IST
ಅಕ್ಷರ ಗಾತ್ರ

ನವದೆಹಲಿ: 18ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಳ ಬಹುಮತದತ್ತ ಮುನ್ನಡೆಯುತ್ತಿದ್ದರೂ, ಬಿಜೆಪಿ ಹಿನ್ನಡೆ ಅನುಭವಿಸಿದೆ. ಇದೇ ವೇಳೆ, ವಿಪಕ್ಷಗಳು ಕೂಡ ಅತ್ಯುತ್ತಮ ಸಾಧನೆ ಮಾಡಿರುವುದು ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಬಣದಲ್ಲಿ ಹೊಸ ಹುರುಪು ಮೂಡಿಸಿದೆ.

ಚುನಾವಣಾ ಆಯೋಗದ ತಾಜಾ ಟ್ರೆಂಡ್ ಪ್ರಕಾರ (ಮಧ್ಯಾಹ್ನ 12ಕ್ಕೆ) ಎನ್‌ಡಿಎ 296 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಎನ್‌ಡಿಎ ನಿಕಟ ಪೈಪೋಟಿ ಒಡ್ಡುತ್ತಿರುವ 'ಇಂಡಿಯಾ' ಮೈತ್ರಿಕೂಟ 227 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದರೊಂದಿಗೆ ಮತಗಟ್ಟೆ ಸಮೀಕ್ಷೆಗೆ ವ್ಯತಿರಿಕ್ತ ಫಲಿತಾಂಶ ಹೊರಬೀಳುತ್ತಿರುವುದು ಸ್ಪಷ್ಟವಾಗಿದೆ.

ಬಹುಮತ ಗಳಿಸಲು ಬೇಕಾಗಿರುವ ಮ್ಯಾಜಿಕ್ ಸಂಖ್ಯೆ 272 ಆಗಿದೆ. ಪ್ರಮುಖ ಪಕ್ಷಗಳ ಪೈಕಿ ಬಿಜೆಪಿ 236 ಹಾಗೂ ಕಾಂಗ್ರೆಸ್ 97 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಹಾಗೂ ಕಾಂಗ್ರೆಸ್ 52 ಸ್ಥಾನ ಗಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT