ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಕೇಂದ್ರ ಸಚಿವ ನಾರಾಯಣ ರಾಣೆ ನಾಮಪತ್ರ ಸಲ್ಲಿಕೆ

Published 19 ಏಪ್ರಿಲ್ 2024, 12:22 IST
Last Updated 19 ಏಪ್ರಿಲ್ 2024, 12:22 IST
ಅಕ್ಷರ ಗಾತ್ರ

ರತ್ನಗಿರಿ: ಮಹಾರಾಷ್ಟ್ರದ ರತ್ನಗಿರಿ– ಸಿಂಧುದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ನಾರಾಯಣ ರಾಣೆ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಯಾಗಿರುವ ರಾಣೆ ಅವರು ಇದೇ ಮೊದಲ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಚಿವರಾದ ದೀಪಕ್‌ ಕೇಸರ್ಕರ್‌ ಮತ್ತು ಉದಯ್‌ ಸಾಮಂತ್‌ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಜತೆಗಿದ್ದರು.

‘ಎನ್‌ಡಿಎ ಕೂಟವು 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಬೇಕೆಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅದನ್ನು ಈಡೇರಿಸಲು ಎಲ್ಲ ಕಾರ್ಯಕರ್ತರೂ ತಮ್ಮ ಕೊಡುಗೆ ನೀಡಬೇಕು’ ಎಂದು ರಾಣೆ ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT