ಇಂಫಾಲ್: ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಇಂದು (ಸೋಮವಾರ) ಮರು ಮತದಾನ ಆರಂಭಗೊಂಡಿದೆ.

ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಮತದಾರರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿರುವ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಹಂಚಿಕೊಂಡಿದೆ.

ಮಣಿಪುರದ ಇನ್ನರ್ ಮಣಿಪುರ ಮತ್ತು ಔಟರ್ ಮಣಿಪುರ ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದಲ್ಲಿ ಮತದಾನ ನಡೆದಿತ್ತು. ಎರಡು ಕಡೆ ಮತಗಟ್ಟೆ ಬಳಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು. ಅದೇ ರೀತಿ, ಶಸ್ತ್ರಸಜ್ಜಿತ ವ್ಯಕ್ತಿಗಳು ನಿರ್ದಿಷ್ಟ ರಾಜಕೀಯ ಪಕ್ಷದ ಚುನಾವಣಾ ಏಜೆಂಟರನ್ನು ಬೆದರಿಸಿ, ಮತಗಟ್ಟೆಗಳಿಂದ ಹೊರ ಹೋಗುವಂತೆ ಬೆದರಿಸಿದ್ದರು. ಕೆಲವು ಕಡೆದ ಮತಯಂತ್ರಗಳಿಗೆ ಹಾನಿ ಉಂಟುಮಾಡಲಾಗಿತ್ತು.

‘ಇನ್ನರ್ ಮಣಿಪುರದ 36 ಮತಗಟ್ಟೆಗಳು ಮತ್ತು ಔಟರ್ ಮಣಿಪುರದ 11 ಮತಗಟ್ಟೆಗಳಿಗೆ ಮರು ಮತದಾನ ನಡೆಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ’ ಎಂದು ಮಣಿಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಕೆ.ಮೇಘಚಂದ್ರ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.