ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಳೆ ಮತ ಎಣಿಕೆ; ಮೊದಲ ಬಾರಿಗೆ ಚುನಾವಣೋತ್ತರ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

Published 3 ಜೂನ್ 2024, 5:15 IST
Last Updated 3 ಜೂನ್ 2024, 5:15 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಾಳೆ (ಜೂನ್‌ 4ರಂದು) ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಒಂದು ದಿನ ಮುಂಚಿತವಾಗಿ ಇಂದು ಮಧ್ಯಾಹ್ನ 12.30ಕ್ಕೆ ಪತ್ರಿಕಾಗೋಷ್ಠಿ ಕರೆದಿದೆ.

ಚುನಾವಣಾ ಆಯೋಗವು ಭಾರತದ ಚುನಾವಣಾ ಇತಿಹಾಸದಲ್ಲಿ ಚುನಾವಣೋತ್ತರ ಪತ್ರಿಕಾಗೋಷ್ಠಿ ಕರೆದಿರುವುದು ಇದೇ ಮೊದಲು. 2019ರ ಸಂಸತ್ ಚುನಾವಣೆ ವರೆಗೆ, ಪ್ರತಿ ಹಂತದ ಮತದಾನ ಮುಕ್ತಾಯದ ಬಳಿಕ ಉಪ ಚುನಾವಣಾ ಆಯುಕ್ತರು ಮಾಧ್ಯಮ ಸಂವಾದ ನಡೆಸುತ್ತಿದ್ದರು. ಇದೀಗ ಆಯೋಗವೇ ಪತ್ರಿಕಾಗೋಷ್ಠಿ ಕರೆದಿದ್ದು, ಹಿಂದಿನ ಸಂಪ್ರದಾಯ ನಿಲ್ಲಿಸಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಆಯೋಗ, '2024ರ ಸಾರ್ವತ್ರಿಕ ಚುನಾವಣೆ ಕುರಿತು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಲಿದೆ' ಎಂದು ತಿಳಿಸಿದೆ.

543 ಕ್ಷೇತ್ರಗಳನ್ನೊಳಗೊಂಡ ಲೋಕಸಭಾ ಚುನಾವಣೆಗೆ ಏಳು ಹಂತದಲ್ಲಿ ಮತದಾನ ನಿಗದಿಯಾಗಿತ್ತು. ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆದರೆ, ಕೊನೇ ಹಂತದ ಮತದಾನ ಜೂನ್ 1ರಂದು ನಡೆದಿತ್ತು.

ಮೋದಿ ಹ್ಯಾಟ್ರಿಕ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ‘ಹ್ಯಾಟ್ರಿಕ್‌’ ಗೆಲುವು ಸಾಧಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿವೆ.

ಎನ್‌ಡಿಎಗೆ 350ಕ್ಕೂ ಹೆಚ್ಚು ಸ್ಥಾನಗಳು ದೊರೆಯಲಿವೆ. ‘ಇಂಡಿಯಾ’ ಮೈತ್ರಿಕೂಟಕ್ಕೆ 125 ರಿಂದ 150ರ ಸ್ಥಾನಗಳು ಸಿಗಲಿವೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT