ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿ ತರೂರ್‌ ಆಸ್ತಿ ₹ 20 ಕೋಟಿ ಹೆಚ್ಚಳ

Published 5 ಏಪ್ರಿಲ್ 2024, 14:04 IST
Last Updated 5 ಏಪ್ರಿಲ್ 2024, 14:04 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿರುವ ಕಾಂಗ್ರೆಸ್‌ ಅಭ್ಯರ್ಥಿ ಶಶಿ ತರೂರ್‌ ಅವರ ಆಸ್ತಿ ಕಳೆದ ಐದು ವರ್ಷಗಳಲ್ಲಿ ₹ 20 ಕೋಟಿಯಷ್ಟು ಹೆಚ್ಚಳವಾಗಿದೆ.

ತಮ್ಮ ಬಳಿ ₹ 55 ಕೋಟಿ ಆಸ್ತಿ ಇರುವುದಾಗಿ ಅವರು ಪ್ರಮಾಣಪತ್ರದಲ್ಲಿ ಘೋಷಿಸಿಕೊಂಡಿದ್ದಾರೆ. 2014 ರಲ್ಲಿ ₹ 23 ಕೋಟಿ ಹಾಗೂ 2019 ರಲ್ಲಿ ₹ 35 ಕೋಟಿ ಆಸ್ತಿ ಇರುವುದಾಗಿ ಅವರು ಘೋಷಿಸಿಕೊಂಡಿದ್ದರು.

19 ಬ್ಯಾಂಕ್‌ ಖಾತೆಗಳಲ್ಲಿರುವ ಮೊತ್ತ, ಮ್ಯುಚುವಲ್ ಫಂಡ್, ವಿವಿಧ ಬಾಂಡ್‌ಗಳಲ್ಲಿ ಹೂಡಿಕೆ ಸೇರಿದಂತೆ ಒಟ್ಟು ₹ 49 ಕೋಟಿ ಚರಾಸ್ತಿ ಹೊಂದಿರುವುದಾಗಿ ವಿವರ ನೀಡಿದ್ದಾರೆ. 

ಪಾಲಕ್ಕಾಡ್‌ನಲ್ಲಿ 2.51 ಎಕರೆ ಕೃಷಿ ಭೂಮಿ ಮತ್ತು ತಿರುವನಂತಪುರದಲ್ಲಿ 10.47 ಎಕರೆ ಜಮೀನು ಸೇರಿದಂತೆ ಒಟ್ಟು ₹ 6.75 ಕೋಟಿ ಮೌಲ್ಯದ ಸ್ಥಿರಾಸ್ತಿ ಇರುವುದಾಗಿ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ರಾಜೀವ್‌ ಚಂದ್ರಶೇಖರ್‌ ಆಸ್ತಿ ₹ 28 ಕೋಟಿ

ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ₹ 28 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರೆ. ₹ 13.69 ಕೋಟಿ ಚರಾಸ್ತಿ ಹಾಗೂ ₹ 14.40 ಕೋಟಿ ಸ್ಥಿರಾಸ್ತಿ ಹೊಂದಿರುವುದಾಗಿ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT