ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯ್‌ಬರೇಲಿಯಲ್ಲಿ ಇಂದು ಸೋನಿಯಾ ಗಾಂಧಿ, ಅಖಿಲೇಶ್ ಯಾದವ್ ಪ್ರಚಾರ

Published 16 ಮೇ 2024, 16:43 IST
Last Updated 17 ಮೇ 2024, 4:41 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು (ಮೇ 17) ರಾಯ್‌ಬರೇಲಿಯಲ್ಲಿ ತಮ್ಮ ಮಗ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲಿದ್ದಾರೆ. ಅವರಿಗೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸಾಥ್ ನೀಡಲಿದ್ದಾರೆ.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಇದು ಸೋನಿಯಾ ಗಾಂಧಿಯವರ ಮೊದಲ ಮತ್ತು ಬಹುಶಃ ಕೊನೆಯ ರ್‍ಯಾಲಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಆರೋಗ್ಯ ಸಮಸ್ಯೆಯಿಂದ ಕಳೆದ ಕೆಲ ವರ್ಷಗಳಿಂದ ಅವರು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ.

ರಾಯ್‌ ಬರೇಲಿಯ ಐಟಿಐ ಮೈದಾನದಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸೋನಿಯಾ ಮತ್ತು ಅಖಿಲೇಶ್ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಚಾರ ಕಾರ್ಯದ ಮೇಲ್ವಿಚಾರಣೆ ನಡೆಸುತ್ತಿರುವ ಪ್ರಿಯಾಂಕಾ ವಾದ್ರಾ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಹುಲ್ ಪರ ಪ್ರಚಾರ ನಡೆಸಿದ್ದರು.

2004ರಿಂದ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ರಾಯ್ ಬರೇಲಿ ಕ್ಷೇತ್ರದಿಂದ ಈ ಬಾರಿ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಅಂತಿಮ ದಿನದವರೆಗೂ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ಘೋಷಣೆಯಾಗಿರಲಿಲ್ಲ. ಪ್ರಿಯಾಂಕಾ ಗಾಂಧಿ ಹೆಸರೇ ಹೆಚ್ಚು ಕೇಳಿಬರುತ್ತಿತ್ತು. ಪ್ರಿಯಾಂಕಾ ಸ್ಪರ್ಧೆಗೆ ನಿರಾಕರಿಸಿದ್ದರಿಂದ ರಾಹುಲ್ ಅವರನ್ನೇ ಕಣಕ್ಕಿಳಿಸುವ ನಿರ್ಧಾರಕ್ಕೆ ಕಾಂಗ್ರೆಸ್ ಬಂದಿತು.

ಮೇ 8ರಿಂದ ಪ್ರಿಯಾಂಕಾ ಗಾಂಧಿ ರಾಯ್‌ಬರೇಲಿಯಲ್ಲಿ 50ಕ್ಕೂ ಅಧಿಕ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT