ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಪಶ್ಚಿಮ ಬಂಗಾಳದ ತಮ್ಲುಕ್‌ ಕ್ಷೇತ್ರದಲ್ಲಿ ಟಿಎಂಸಿ ನಾಯಕನ ಹತ್ಯೆ

Published 25 ಮೇ 2024, 6:29 IST
Last Updated 25 ಮೇ 2024, 6:29 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಮಹಿಷಾದಲ್‌ನಲ್ಲಿ ಶುಕ್ರವಾರ ತಡರಾತ್ರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಲುಕ್ ಸೇರಿದಂತೆ ಇತರೆ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಇಂದು (ಶನಿವಾರ) ಮತದಾನ ನಡೆಯುತ್ತಿದೆ. ಇದರ ನಡುವೆ ತಮ್ಲುಕ್ ಕ್ಷೇತ್ರದ ಮಹಿಷಾದಲ್‌ನಲ್ಲಿ ಮೊಯಿಬುಲ್ ಶೇಖ್ (42) ಅವರನ್ನು ಹತ್ಯೆ ಮಾಡಲಾಗಿದ್ದು, ಟಿಎಂಸಿ –ಬಿಜೆಪಿ ಮಧ್ಯೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

ಮೊಯಿಬುಲ್ ಶೇಖ್ ಶುಕ್ರವಾರ ಸಂಜೆ ಮನೆಗೆ ವಾಪಸಾಗುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬಿಜೆಪಿಯ ಗೂಂಡಾಗಳ ಗುಂಪೊಂದು ಶೇಖ್ ಮತ್ತು ಇತರ ಇಬ್ಬರು ಕಾರ್ಯಕರ್ತರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದೆ ಎಂದು ಟಿಎಂಸಿ ಶಾಸಕ ತಿಲಕ್ ಚಕ್ರವರ್ತಿ ಆರೋಪಿಸಿದ್ದಾರೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಶೇಖ್ ಅವರು ಆಸ್ಪತ್ರೆಗೆ ಕರೆದೊಯ್ದ ವೇಳೆ ಮೃತಪಟ್ಟಿದ್ದಾರೆ. ಇತರ ಇಬ್ಬರು ಕಾರ್ಯಕರ್ತರು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಚಕ್ರವರ್ತಿ ವಿವರಿಸಿದ್ದಾರೆ.

ತಮ್ಲುಕ್ ಲೋಕಸಭಾ ಕ್ಷೇತ್ರದಿಂದ ಕಲ್ಕತ್ತ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯಾಗಿರುವ ಗಂಗೋಪಾಧ್ಯಾಯ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇತ್ತ ಟಿಎಂಸಿ ಅಭ್ಯರ್ಥಿಯಾಗಿ ದೇಬಾಂಗ್‌ಶು ಭಟ್ಟಾಚಾರ್ಯ ಸ್ಪರ್ಧಿಸಿದ್ದಾರೆ.

ಈಚೆಗೆ ಇದೇ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತೆಯ ಹತ್ಯೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT