ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಅಣ್ಣಾಮಲೈ ವಿರುದ್ಧ 2 ದೂರು ದಾಖಲು

Published 15 ಏಪ್ರಿಲ್ 2024, 4:52 IST
Last Updated 15 ಏಪ್ರಿಲ್ 2024, 4:52 IST
ಅಕ್ಷರ ಗಾತ್ರ

ಚೆನ್ನೈ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ತಮಿಳುನಾಡಿನ ಕೋಯಮತ್ತೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಅಣ್ಣಾಮಲೈ ವಿರುದ್ಧ ಎರಡು ದೂರು ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ 143, 286, 341 ಹಾಗೂ 290 ಸೆಕ್ಷನ್‌ಗಳಡಿ ದೂರು ದಾಖಲಾಗಿದೆ.

ಸುಳೂರು ಹಾಗೂ ಸಿಂಗನಲ್ಲೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಗದಿತ ಸಮಯ ಮೀರಿ ಪ್ರಚಾರ ಮಾಡಿದ ಆರೋ‍ಪದಲ್ಲಿ ಕಳೆದ ವಾರ ಅಣ್ಣಾಮಲೈ ಹಾಗೂ ಅವರ ಬೆಂಬಲಿಗರ ಮೇಲೆ ಐಪಿಸಿಯ ವಿವಿಧ ಕಲಂಗಳಡಿ ದೂರು ದಾಖಲಾಗಿತ್ತು. ಡಿಎಂಕೆ ಸದಸ್ಯ ನೀಡಿದ ದೂರಿನ ಆಧಾರದಲ್ಲಿ ಪೀಲಮೇಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

(ಪಿಟಿಐ ಮಾಹಿತಿಯಿಂದ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT