ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿಮ್ಮ ಒಂದು ಮತ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಿಸಲಿದೆ: ಮತದಾರರಿಗೆ ಪ್ರಿಯಾಂಕಾ

Published 20 ಮೇ 2024, 6:00 IST
Last Updated 20 ಮೇ 2024, 6:00 IST
ಅಕ್ಷರ ಗಾತ್ರ

ನವದೆಹಲಿ: 5ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು, ನಿಮ್ಮ ಮತ ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಿಂದ ಮುಕ್ತಗೊಳಿಸುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತದಾರರಿಗೆ ಕರೆ ನೀಡಿದ್ದಾರೆ.

ಐದನೇ ಹಂತದಲ್ಲಿ 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 49 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿ ಹಲವು ನಾಯಕರು ಕಣದಲ್ಲಿದ್ದಾರೆ.

‘ನಿಮ್ಮ ಒಂದು ಮತದಿಂದ ಪ್ರತಿ ಬಡಕುಟುಂಬದ ಮಹಿಳೆಯ ಬ್ಯಾಂಕ್ ಖಾತೆಗೆ ವಾರ್ಷಿಕವಾಗಿ ₹1 ಲಕ್ಷ ಜಮೆ ಆಗಲಿದೆ. ಪ್ರತಿಯೊಬ್ಬ ನಾಗರಿಕ ₹25 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಲಿದ್ದಾನೆ. ಯುವಕರು 30 ಲಕ್ಷ ಸರ್ಕಾರಿ ಹುದ್ದೆ ಪಡೆಯಲಿದ್ದಾರೆ. ಯುವಕರು ವರ್ಷಕ್ಕೆ ₹1 ಲಕ್ಷ ಅಪ್ರೆಂಟೀಸ್‌ಷಿಪ್ ಪಡೆಯಲಿದ್ದಾರೆ. ಎಸ್‌ಸಿ, ಎಸ್‌ಟಿ,ಒಬಿಸಿ ಜನರಿಗೆ ಸ್ಥಾನಮಾನ ಸಿಗಲಿದೆ. ನಿಮ್ಮ ಒಂದು ಮತ ದೇಶದ ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸಲಿದೆ’ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಅತ್ಯಧಿಕ ಪ್ರಮಾಣದಲ್ಲಿ ಮತ ಹಾಕುವಂತೆ ಮತದಾರರಿಗೆ ಅವರು ಕರೆ ನೀಡಿದ್ದಾರೆ.

‘ನಿಮ್ಮ ಒಂದು ಮತ ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಿಂದ ಮುಕ್ತಗೊಳಿಸುತ್ತದೆ ಮತ್ತು ದೇಶವನ್ನು ಬಲಿಷ್ಠಗೊಳಿಸುತ್ತದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT