ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಪ್ರಿಯಾಂಕಾ ಗಾಂಧಿ ಆಪ್ತ ತೇಜಿಂದರ್‌ ಸಿಂಗ್‌ ಬಿಜೆಪಿಗೆ ಸೇರ್ಪಡೆ

Published 20 ಏಪ್ರಿಲ್ 2024, 14:09 IST
Last Updated 20 ಏಪ್ರಿಲ್ 2024, 14:09 IST
ಅಕ್ಷರ ಗಾತ್ರ

ನವದೆಹಲಿ: ಎಐಸಿಸಿ ಹಿಮಾಚಲ ಪ್ರದೇಶ ಉಸ್ತುವಾರಿ ಕಾರ್ಯದರ್ಶಿ ತೇಜಿಂದರ್‌ ಸಿಂಗ್‌ ಬಿಟ್ಟೂ ಅವರು ಶನಿವಾರ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದರು.

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಆಪ್ತರಾಗಿದ್ದ ಬಿಟ್ಟೂ ಅವರೊಂದಿಗೆ, ಕಾಂಗ್ರೆಸ್‌ನ ಮಾಜಿ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಪತ್ನಿ ಕರಮ್‌ಜೀತ್ ಕೌರ್‌ ಚೌಧರಿ ಅವರೂ ಬಿಜೆಪಿಗೆ ಸೇರ್ಪಡೆಗೊಂಡರು.

ಕಳೆದ ವರ್ಷ ಸಂತೋಖ್ ಸಿಂಗ್ ಅವರ ನಿಧನದ ಬಳಿಕ ಜಲಂಧರ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕರಮ್‌ಜೀತ್ ಅವರು ಎಎಪಿ ಅಭ್ಯರ್ಥಿ ಸುಶೀಲ್‌ ಕುಮಾರ್‌ ರಿಂಕು ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದರು.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT