ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಅಧಿಕಾರಕ್ಕೆ ಬಂದರೆ ದಲಿತರು, ಆದಿವಾಸಿಗಳು ಮತ್ತೆ ಗುಲಾಮರಾಗುತ್ತಾರೆ: ಖರ್ಗೆ

Published 12 ಮೇ 2024, 14:29 IST
Last Updated 12 ಮೇ 2024, 14:29 IST
ಅಕ್ಷರ ಗಾತ್ರ

ಧುಲೆ (ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ಧುಲೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶೋಭಾ ಬಚಾವ್ ಪರ ಮತಯಾಚಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

‘ಸ್ವಾತಂತ್ರ್ಯಕ್ಕೂ ಮುನ್ನ ದೇಶದಲ್ಲಿ ಬಡವರು, ದಲಿತರು ಮತ್ತು ಆದಿವಾಸಿಗಳನ್ನು ಗುಲಾಮರಂತೆ ನಡೆಸಿಕೊಳ್ಳಲಾಗುತ್ತಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಮೂರನೇ ಅವಧಿಗೆ ಗೆದ್ದು ಅಧಿಕಾರಕ್ಕೇರಿದರೆ ಮತ್ತೆ ಅದೇ ಪರಿಸ್ಥಿತಿ ಪುನರಾವರ್ತನೆಯಾಗುತ್ತದೆ. ನಾವು ಮತ್ತೆ ಗುಲಾಮರಾಗುತ್ತೇವೆ’ ಎಂದು ಖರ್ಗೆ ಗುಡುಗಿದ್ದಾರೆ.

‘ನೀವು (ಮತದಾರರು) ನಿಮ್ಮ ಸ್ವಂತಕ್ಕಾಗಿ ಮತ್ತು ನಿಮ್ಮ ಜನರಿಗಾಗಿ ಮತ ಚಲಾಯಿಸಬೇಕು. ನಾವು ಸಂವಿಧಾನವನ್ನು ಉಳಿಸಬೇಕಾಗಿದೆ. ಈ ಚುನಾವಣೆ ದೇಶದ ಭವಿಷ್ಯವನ್ನು ರೂಪಿಸುತ್ತದೆ. ಹೀಗಾಗಿ ಇದೊಂದು ಮಹತ್ವದ ಚುನಾವಣೆಯಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT