ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಹಂತದ ಮತದಾನ ಅದ್ಭುತವಾಗಿದೆ: ಮತದಾರರಿಗೆ ಪ್ರಧಾನಿ ಮೋದಿ ಕೃತಜ್ಞತೆ

Published 27 ಏಪ್ರಿಲ್ 2024, 4:53 IST
Last Updated 27 ಏಪ್ರಿಲ್ 2024, 4:53 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆದಿತ್ತು.

‘ಮತ ಚಲಾಯಿಸಿದ ದೇಶದಾದ್ಯಂತದ ಜನರಿಗೆ ಕೃತಜ್ಞತೆಗಳು. ಎನ್‌ಡಿಎಗೆ ಸಿಕ್ಕಿರುವ ಭಾರೀ ಜನಬೆಂಬಲವು ವಿರೋಧಪಕ್ಷಗಳನ್ನು ಇನ್ನಷ್ಟು ಹತಾಶೆಗೊಳಿಸಲಿದೆ. ಮತದಾರರು ಎನ್‌ಡಿಎಯ ಉತ್ತಮ ಆಡಳಿತವನ್ನು ಬಯಸುತ್ತಾರೆ. ಯುವಕರು ಮತ್ತು ಮಹಿಳಾ ಮತದಾರರು ಪ್ರಬಲ ಎನ್‌ಡಿಎ ಬೆಂಬಲಕ್ಕೆ ಶಕ್ತಿ ತುಂಬುತ್ತಿದ್ದಾರೆ’ ಎಂದು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇರಳದ ಎಲ್ಲ 20 ಕ್ಷೇತ್ರಗಳು ಸೇರಿದಂತೆ ರಾಜಸ್ಥಾನದ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದಲ್ಲಿ 7, ಬಿಹಾರ ಮತ್ತು ಅಸ್ಸಾಂನಲ್ಲಿ ತಲಾ 5, ಛತ್ತೀಸಗಡ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 3 ಹಾಗೂ ಮಣಿಪುರ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 1 ಕ್ಷೇತ್ರಗಳಲ್ಲಿಯೂ ಮತದಾನ ನಡೆದಿತ್ತು.

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಶಶಿ ತರೂರ್‌, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ನಟಿ ಹೇಮಾ ಮಾಲಿನಿ ಸೇರಿದಂತೆ ಪ್ರಮುಖರು ಕಣದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT