ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮತ್ತೆ ಪ್ರಧಾನಿ: ಎಚ್‌.ಡಿ. ದೇವೇಗೌಡ ಆಶಯ

Published 18 ಮೇ 2024, 16:23 IST
Last Updated 18 ಮೇ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿಯವರೇ ನೀವು ಮೂರನೇ ಬಾರಿಗೆ ಪ್ರಧಾನಿಯಾಗಿ ರಾಷ್ಟ್ರವನ್ನು ಮುನ್ನಡೆಸುವುದನ್ನು ಎದುರು ನೋಡುತ್ತಿದ್ದೇನೆ’

–ಇದು 92ನೇ ವರ್ಷಕ್ಕೆ ಕಾಲಿಟ್ಟ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ತಮಗೆ ಶುಭ ಹಾರೈಸಿದ ಪ್ರಧಾನಿ ಮೋದಿ ಅವರಿಗೆ ನೀಡಿದ ಪ್ರತಿಕ್ರಿಯೆ.

‘ದೇವೇಗೌಡಜೀ ತಾವು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಲ್ಲಿ ಗೌರವ ಪಡೆದಿದ್ದೀರಿ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ನಿಮ್ಮ ಒಲವು ಗಮನಾರ್ಹವಾಗಿದೆ. ನಿಮಗೆ ದೀರ್ಘ ಹಾಗೂ ಆರೋಗ್ಯಕರ ಜೀವನ ದೊರೆಯಲಿ ಪ್ರಾರ್ಥಿಸುವೆ’ ಎಂದು ಪ್ರಧಾನಿ ‘ಎಕ್ಸ್‌’ ಮೂಲಕ ಶುಭ ಕೋರಿದ್ದರು.  

‘ನನ್ನ ಜನ್ಮದಿನಕ್ಕೆ ಶುಭ ಕೋರಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಉದಾರವಾದ ಮಾತುಗಳು ನನಗೆ ಸಾಂತ್ವನ ನೀಡಿವೆ’ ಎಂದು ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT