ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls: 16 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಉದ್ಧವ್ ನೇತೃತ್ವದ ಶಿವಸೇನಾ

Published 27 ಮಾರ್ಚ್ 2024, 5:02 IST
Last Updated 27 ಮಾರ್ಚ್ 2024, 5:02 IST
ಅಕ್ಷರ ಗಾತ್ರ

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ತನ್ನ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಬುಧವಾರ) ಬಿಡುಗಡೆ ಮಾಡಿದೆ.

ಮಾಜಿ ಕೇಂದ್ರ ಸಚಿವರಾದ ಅನಂತ್‌ ಗೀತೆ ಮತ್ತು ಅರವಿಂದ್ ಸಾವಂತ್ ಅವರು ಕ್ರಮವಾಗಿ ರಾಯಗಡ ಮತ್ತು ದಕ್ಷಿಣ ಮುಂಬೈ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಥಾಣೆಯಿಂದ ರಾಜನ್ ವಿಚಾರೆ, ಮುಂಬೈ ವಾಯುವ್ಯದಿಂದ ಅಮೊಲ್ ಕೀರ್ತಿಕರ್ ಮತ್ತು ಮುಂಬೈ ಈಶಾನ್ಯದಿಂದ ಸಂಜಯ್ ಪಾಟೀಲ್ ಕಣಕ್ಕಿಳಿಯಲಿದ್ದಾರೆ.

ಮಹಾ ವಿಕಾಸ್ ಅಘಾಡಿ ಮೈತ್ರಿಯ ಶಿವಸೇನಾ (ಯುಬಿಟಿ), ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮಧ್ಯೆ ಸೀಟು ಹಂಚಿಕೆ ಮಾತುಕತೆ ನಡೆಸಿದ್ದು, ಅಭ್ಯರ್ಥಿಗಳ ಘೋಷಣೆಯಷ್ಟೇ ಬಾಕಿಯಿದೆ.

48 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಏಪ್ರಿಲ್ 19ರಿಂದ ಐದು ಹಂತಗಳಲ್ಲಿ ಮತದಾನ ನಡೆಯಲಿದೆ.

ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಏಪ್ರಿಲ್‌ 19ರಿಂದ ಜೂನ್ 1ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT