ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Poll Result 2024: ಸ್ಮೃತಿ ಇರಾನಿ, ಒಮರ್ ಸೇರಿ ಸೋತ ಪ್ರಮುಖರು...

Published 4 ಜೂನ್ 2024, 11:17 IST
Last Updated 4 ಜೂನ್ 2024, 11:17 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖ ನಾಯಕರ ಸೋತ ವಿವರ ಇಲ್ಲಿದೆ.

 ಸ್ಮೃತಿ ಇರಾನಿ (ಬಿಜೆಪಿ)

ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ಎದುರು ಸುಮಾರು 96 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. 2019ರಲ್ಲಿ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿ ವಿರುದ್ಧ ಜಯ ಸಾಧಿಸಿ, ಲೋಕಸಭೆ ಪ್ರವೇಶಿಸಿದ್ದರು. 

ಒಮರ್ ಅಬ್ದುಲ್ಲಾ ( ನ್ಯಾಷನಲ್‌ ಕಾನ್ಫರೆನ್ಸ್‌)

ಜಮ್ಮು–ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದಿಂದ ಒಮರ್ ಅಬ್ದುಲ್ಲಾ ಅವರು ಪ್ರಸ್ತುತ ಜೈಲಿನಲ್ಲಿರುವ ಮಾಜಿ ಶಾಸಕ ಶೇಖ್ ಅಬ್ದುಲ್ ರಶೀದ್ ಅವರ ಎದುರು 1.25 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲುಂಡಿದ್ದಾರೆ. ತಮ್ಮ ವಿರುದ್ಧ ಗೆಲುವು ಸಾಧಿಸಿರುವ ಎಂಜಿನಿಯರ್ ರಶೀದ್ ಅವರಿಗೆ ಒಮರ್ ಅಬ್ದುಲ್ಲಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮೆಹಬೂಬಾ ಮುಫ್ತಿ (ಪಿಡಿಪಿ)

ಪಿಡಿಪಿಯ ನಾಯಕಿ ಮೆಹಬೂಬಾ ಮುಫ್ತಿ ಅವರು ಅನಂತ್‌ನಾಗ್‌–ರಜೌರಿ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT