ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಪ್ರಚಾರಕ್ಕೆ ನೆರವಾಗಲು ಚುನಾವಣಾ ಆಯೋಗದಿಂದ ಏಳು ಹಂತದ ಮತದಾನ: ಮಮತಾ

Published 20 ಏಪ್ರಿಲ್ 2024, 11:19 IST
Last Updated 20 ಏಪ್ರಿಲ್ 2024, 11:19 IST
ಅಕ್ಷರ ಗಾತ್ರ

ಮಾಲ್ಡಾ (ಪ.ಬಂಗಾಳ): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವ್ಯಾಪಕ ಪ್ರಚಾರಕ್ಕೆ ನೆರವಾಗುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಮತದಾನ ಆಯೋಜಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.

ಲೋಕಸಭೆಗೆ ಏಪ್ರಿಲ್ 19ರಿಂದ ಜೂನ್ 1ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವರಿಗೆ ದೇಶದ ಸಂಪನ್ಮೂಲಗಳನ್ನು ಬಳಕೆ ಮಾಡಿ ವ್ಯಾಪಕ ಪ್ರಚಾರ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಏಳು ಹಂತಗಳಲ್ಲಿ ಮತದಾನ ಹಮ್ಮಿಕೊಂಡಿದೆ ಎಂದು ಮಮತಾ ದೂರಿದರು.

ಮಾಲ್ಡಾ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಹಿಂದೆಲ್ಲ ಮೇ ತಿಂಗಳೊಳಗೆ ಚುನಾವಣೆ ಮುಕ್ತಾಯಗೊಳ್ಳುತ್ತಿತ್ತು. ಈ ವರ್ಷ ವಿಶೇಷ ವಿಮಾನಗಳಲ್ಲಿ ವ್ಯಾಪಕ ಪ್ರಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮತದಾನವನ್ನು ಜೂನ್ 1ರವರೆಗೆ ಮುಂದೂಡಲಾಗಿದೆ. ಪ್ರತಿ ಹಂತದ ಮತದಾನಕ್ಕೂ ಮೊದಲು ಪ್ರಧಾನಿ ಮೋದಿ ಹಾಗೂ ಸಂಪುಟ ದರ್ಜೆಯ ಸಚಿವರು ವಿಶೇಷ ವಿಮಾನಗಳಲ್ಲಿ ಸಂಚರಿಸಿ ಪ್ರಚಾರ ಮಾಡಬಹುದಾಗಿದೆ' ಎಂದು ಅವರು ಆರೋಪಿಸಿದರು.

ಬಿಸಿಲಿನ ತಾಪದಿಂದ ಜನರು ತೊಂದರೆಗೀಡಾಗಿದ್ದಾರೆ. ಆದರೆ ಬಿಜೆಪಿ ನಾಯಕರು ವಿವಿಐಪಿ ಸೌಲಭ್ಯದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT