ಯವತ್ಮಾಲ್ (ಮಹಾರಾಷ್ಟ್ರ) : ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೂರ್ಚೆ ಹೋದರು.

ಯವತ್ಮಾಲ್ –ವಾಶಿಂ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪುಸಾದ್‌ನಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗ ಸಚಿವರು ಮೂರ್ಚೆ ಹೋಗಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದುಕೊಂಡಿದ್ದಾರೆ. ಕೆಲ ನಿಮಿಷಗಳ ನಂತರ ಚೇತರಿಸಿಕೊಂಡ ಅವರು ಭಾಷಣ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಬಿಸಿಲ ಧಗೆಗೆ ಅಸ್ವಸ್ಥಗೊಂಡಿದ್ದೆ. ಈಗ ನಾನು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಚುನಾವಣಾ ರ್‍ಯಾಲಿಗಳಲ್ಲಿ ಪಾಲ್ಗೊಳ್ಳುತ್ತೇನೆ’ ಎಂದು ಗಡ್ಕರಿ ಅವರು ‘ಎಕ್ಸ್’ ಮಾಧ್ಯಮದಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.