ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಸ್ಲಿಮರ ಮೀಸಲಾತಿಗಾಗಿ ‘ಇಂಡಿಯಾ’ ಬಣ ಸಂವಿಧಾನವನ್ನು ತಿದ್ದುಪಡಿ ಮಾಡಲಿದೆ: ಮೋದಿ

Published 26 ಮೇ 2024, 9:28 IST
Last Updated 26 ಮೇ 2024, 9:28 IST
ಅಕ್ಷರ ಗಾತ್ರ

ಮಿರ್ಜಾಪುರ (ಉತ್ತರ ಪ್ರದೇಶ): ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ‘ಕೋಮುವಾದ’ ಮತ್ತು ‘ಜಾತಿವಾದ’ದಿಂದ ಕೂಡಿದ್ದು, ಮೈತ್ರಿಕೂಟದ ನಾಯಕರು ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಸಂವಿಧಾನವನ್ನು ತಿದ್ದುಪಡಿ ಮಾಡಲು ನಿರ್ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

ಮಿರ್ಜಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಅನುಪ್ರಿಯಾ ಪರ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

‘ಸಮಾಜವಾದಿ ಪಕ್ಷ (ಎಸ್‌ಪಿ) ಹಾಗೂ ಕಾಂಗ್ರೆಸ್ ವೋಟ್‌ ಬ್ಯಾಂಕ್‌ಗೆ ಮೀಸಲಾಗಿದ್ದರೆ, ನಾವು ಹಿಂದುಳಿದ ವರ್ಗಗಳು ಮತ್ತು ಬಡವರ ಹಕ್ಕುಗಳಿಗೆ ಸಮರ್ಪಿತರಾಗಿದ್ದೇವೆ’ ಎಂದು ಮೋದಿ ತಿಳಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ನಾಯಕರು ಕೋಮುವಾದಿ, ಜಾತಿವಾದಿ ಹಾಗೂ ಪರಿವಾರವಾದಿಗಳಾಗಿದ್ದಾರೆ (ಕುಟುಂಬಗಳ ಹಿಡಿತ). ಅವರು ಅಧಿಕಾರದಲ್ಲಿದ್ದಾಗಲೆಲ್ಲ ಕುಟುಂಬ ರಾಜಕಾರಣದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದು ದೇಶದ ಜನರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಸಮಾಜವಾದಿ ಪಕ್ಷವು ಯಾದವ ಸಮುದಾಯವನ್ನು ನಿರ್ಲಕ್ಷಿಸುವ ಮೂಲಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬದ ಸದಸ್ಯರಿಗೆ ಮಾತ್ರ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಏಳನೇ ಮತ್ತು ಕೊನೆಯ ಹಂತದ ಮತದಾನ ಜೂನ್‌ 1ರಂದು ನಡೆಯಲಿದೆ. ಜೂನ್‌ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT