ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls 2024 | ಒಡಿಶಾ: 6 ಲೋಕಸಭೆ, ವಿಧಾನಸಭೆಯ 42 ಸ್ಥಾನಗಳಿಗೆ ಬಿರುಸಿನ ಮತದಾನ

Published 1 ಜೂನ್ 2024, 3:20 IST
Last Updated 1 ಜೂನ್ 2024, 3:20 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಆರು ಲೋಕಸಭಾ ಕ್ಷೇತ್ರಗಳು ಮತ್ತು 147 ವಿಧಾನಸಭಾ ಕ್ಷೇತ್ರಗಳ ಪೈಕಿ ಇನ್ನುಳಿದ 42 ಸ್ಥಾನಗಳಿಗೆ ಬಿಗಿ ಭದ್ರತೆಯ ನಡುವೆ ಶನಿವಾರ ಬೆಳಿಗ್ಗೆ ಮತದಾನ ಆರಂಭವಾಗಿದೆ.

ಮಯೂರ್‌ಗಂಜ್‌, ಬಾಲಸೋರ್, ಭದ್ರಕ್, ಜಾಜ್ಪುರ್ ಲೋಕಸಭಾ ಕ್ಷೇತ್ರಗಳು ಸೇರಿದಂತೆ 42 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಚುನಾವಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತದಾನ ಸಂಜೆ 6 ಗಂಟೆಯವರೆಗೂ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  

ರಾಜ್ಯದಲ್ಲಿ ಏಕಕಾಲದಲ್ಲಿ ನಡೆಯುತ್ತಿರುವ ನಾಲ್ಕನೇ ಮತ್ತು ಅಂತಿಮ ಸುತ್ತಿನ ಚುನಾವಣೆಯಲ್ಲಿ 10,882 ಮತಗಟ್ಟೆಗಳಲ್ಲಿ ಸುಮಾರು 1 ಕೋಟಿ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ.

ಮತದಾನ ಪ್ರಕ್ರಿಯೆಗೆ 36 ಸಾವಿರ ಭದ್ರತಾ ಸಿಬ್ಬಂದಿ ಮತ್ತು 72 ಸಾವಿರ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರು ಲೋಕಸಭಾ ಸ್ಥಾನಗಳಿಗೆ 66 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. 42 ವಿಧಾನಸಭಾ ಕ್ಷೇತ್ರಗಳಿಗೆ 394 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಒಡಿಶಾ ವಿಧಾನಸಭಾ ಸ್ಪೀಕರ್ ಪ್ರಮೀಳಾ ಮಲ್ಲಿಕ್, ಸರ್ಕಾರದ ಮುಖ್ಯ ಸಚೇತಕ ಪ್ರಶಾಂತ್ ಮುದುಲಿ, ಬಿಜೆಪಿ ಒಡಿಶಾ ಘಟಕದ ಅಧ್ಯಕ್ಷ ಮನಮೋಹನ್ ಸಮಲ್, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಸ್ಪರ್ಧೆಯಲ್ಲಿರುವ ಪ್ರಮುಖರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT