ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಉದ್ಯೋಗ ಸೃಷ್ಟಿ, ಸಮಾನತೆಗೆ ಒತ್ತು

Published 5 ಏಪ್ರಿಲ್ 2024, 6:56 IST
Last Updated 5 ಏಪ್ರಿಲ್ 2024, 6:56 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ಶುಕ್ರವಾರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯ ಪತ್ರದ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್‌ ಗಾಂಧಿ ಹಾಗೂ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಚಿದಂಬರಂ ಹಾಗೂ ವೇಣುಗೋಪಾಲ್‌ ಉಪಸ್ಥಿತರಿದ್ದರು. 

ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಗುವುದು ಎಂದು ಹೇಳಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ, ಅಗ್ನಿಪಥ್ ಯೋಜನೆ ರದ್ದು, ವಿವಿಧ ಹಂತಗಳಲ್ಲಿ 30 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ, ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳಿಗಿರುವ ಮೀಸಲಾತಿ ಮೀತಿ ಹೆಚ್ಚಳ ಹಾಗೂ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಈಗಾಗಲೇ ಕಾಂಗ್ರೆಸ್‌ ಪಕ್ಷವು ‘ಪಂಚ ನ್ಯಾಯ’, ‘25 ಗ್ಯಾರಂಟಿ’ಗಳನ್ನು ಘೋಷಿಸಿದೆ. ‘ಮನೆ ಮನೆ ಗ್ಯಾರಂಟಿ’ ಅಭಿಯಾನವು  ಆರಂಭವಾಗಿದೆ. ದೇಶದಾದ್ಯಂತ ಸಮಾಲೋಚನೆಗಳನ್ನು ನಡೆಸಿ ಕಾಂಗ್ರೆಸ್‌, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಇ –ಮೇಲ್‌ ಹಾಗೂ ‘ಆವಾಜ್‌ ಭಾರತ್‌ ಕಿ’ ವೆಬ್‌ಸೈಟ್‌ ಮೂಲಕ ಇದಕ್ಕೆ ಸಾವಿರಾರು ಸಲಹೆಗಳು ಬಂದಿದ್ದವು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT