ಭೋಪಾಲ್: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರ ಅಲೆ ಇದ್ದು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ‘ಕ್ಲೀನ್ ಸ್ವೀಪ್‘ ಸಾಧಿಸುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಒಟ್ಟು 29 ಸ್ಥಾನಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಕಾಂಗ್ರೆಸ್ ಇನ್ನೂ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹುಡುಕಾಟದಲ್ಲಿದೆ ಎಂದು ವ್ಯಂಗ್ಯವಾಡಿದರು.

2014ರ ಲೋಕಸಭಾ ಚುನಾವಣೆಯಲ್ಲಿ 29 ಸ್ಥಾನಗಳ ಪೈಕಿ 27 ಸ್ಥಾನ ಹಾಗೂ 2019ರಲ್ಲಿ 28 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ 2024ರ ಚುನಾವಣೆಯಲ್ಲಿ ಬಿಜೆಪಿ ‘ಕ್ಲೀನ್ ಸ್ವೀಪ್‘ ಮಾಡುವ ಗುರಿಯನ್ನು ಹೊಂದಿದೆ ಎಂದು ಯಾದವ್ ಹೇಳಿದ್ದಾರೆ.

ದೇಶದ ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಆ ಮೂಲಕ ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇರಲಿದ್ದು, ರಾಜ್ಯದ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಧ್ಯಪ್ರದೇಶದ ಸಿಧಿ, ಶಹದೋಲ್, ಜಬಲ್‌ಪುರ್, ಮಂಡ್ಲಾ, ಬಾಲಾಘಾಟ್ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

ದೇಶದ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.