ಹೈದರಾಬಾದ್: ತೆಲಂಗಾಣದಲ್ಲಿ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯವಾಗಲಿದೆ ಎಂದು ಸಂಸದೀಯ ಮಂಡಳಿ ಹಾಗೂ ರಾಜ್ಯಸಭಾ ಸದಸ್ಯ ಕೆ. ಲಕ್ಷ್ಮಣ್ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಜನಪ್ರಿಯತೆ, ಅಭಿವೃದ್ಧಿ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದ ಹಿನ್ನೆಲೆಯಲ್ಲಿ ತೆಲಂಗಾಣದ 17 ಲೋಕಸಭಾ ಸ್ಥಾನಗಳ ಪೈಕಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದರು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ತೆಲಂಗಾಣದಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿತ್ತು.

ರಾಜ್ಯದ ಮೂಲೆ ಮೂಲೆಗಳಿಂದ ಜನರು ಪ್ರಧಾನಿ ಮೋದಿ ಅವರ ಅಭಿವೃದ್ಧಿ ಕಾರ್ಯಕ್ರಮಗಳು, ಬಡವರ ಕಲ್ಯಾಣ ಯೋಜನೆಗಳು ಮತ್ತು ಜಾಗತಿಕ ಮಟ್ಟದಲ್ಲಿ ಭಾರತದ ಸಾಧನೆಯನ್ನು ನೋಡುತ್ತಿದ್ದಾರೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ, ಜನರು ಸ್ಥಳೀಯ ಸಮಸ್ಯೆಗಳಿಗೆ ಮತ ಹಾಕಿರಬಹುದು, ಆದರೆ ಖಂಡಿತವಾಗಿಯೂ ಸಂಸತ್ ಚುನಾವಣೆಯಲ್ಲಿ ಜನರು ಮೋದಿಯ ಅವರನ್ನು ಬೆಂಬಲಿಸುತ್ತಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.