ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿರೋಜ್‌ಪುರ: ಶೇರ್‌ಸಿಂಗ್‌ ಕಾಂಗ್ರೆಸ್‌ ಅಭ್ಯರ್ಥಿ

Published 7 ಮೇ 2024, 14:39 IST
Last Updated 7 ಮೇ 2024, 14:39 IST
ಅಕ್ಷರ ಗಾತ್ರ

ಚಂಡೀಗಢ (ಪಿಟಿಐ): ಪಂಜಾಬ್‌ನ ಫಿರೋಜ್‌ಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಂಸದ ಶೇರ್‌ಸಿಂಗ್‌ ಗುಬಾಯ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ.

2009 ಮತ್ತು 2014ರಲ್ಲಿ ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಟಿಕೆಟ್‌ನಿಂದ ಸ್ಪರ್ಧಿಸಿದ್ದ ಶೇರ್‌ಸಿಂಗ್‌ ಸಂಸದರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಇದರೊಂದಿಗೆ ಪಂಜಾಬ್‌ನ ಎಲ್ಲ 13 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.

ಎಎಪಿಯ ಜಗದೀಪ್‌ ಸಿಂಗ್‌ ಕಾಕಾ ಬ್ರಾರ್ ಮತ್ತು ಎಸ್‌ಎಡಿಯ ನರದೇವ್ ಸಿಂಗ್ ಬಾಬಿ ಮಾನ್ ಅವರ ವಿರುದ್ಧ ಶೇರ್‌ಸಿಂಗ್‌ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಸುರೀಂದರ್ ಕಾಂಬೋಜ್ ಅವರನ್ನು ಇದೇ ಕ್ಷೇತ್ರದಲ್ಲಿ ಸ್ಪರ್ಧಿಯಾಗಿಸಿದೆ.

2019ರ ಚುನಾವಣೆಯಲ್ಲಿ ಎಸ್‌ಎಡಿ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಇಲ್ಲಿಂದ ಗೆದ್ದಿದ್ದರು. ಪಂಜಾಬ್‌ನ 13 ಲೋಕಸಭಾ ಕ್ಷೇತ್ರಗಳಿಗೆ ಜೂನ್‌ 1ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT