ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ | ಮತದಾನ ಪ್ರಕ್ರಿಯೆಯಲ್ಲಿ ಅವ್ಯವಸ್ಥೆ: ತನಿಖೆಗೆ ಕಾಂಗ್ರೆಸ್‌ ಒತ್ತಾಯ

Published 28 ಏಪ್ರಿಲ್ 2024, 16:02 IST
Last Updated 28 ಏಪ್ರಿಲ್ 2024, 16:02 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಈಚೆಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ಉಂಟಾಗಿದ್ದ ಅವ್ಯವಸ್ಥೆಗಳ ಕುರಿತು ತನಿಖೆ ನಡೆಸಬೇಕೆಂದು ಕಾಂಗ್ರೆಸ್‌, ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಹಲವು ಮತಗಟ್ಟೆಗಳಲ್ಲಿ ಅನಗತ್ಯವಾಗಿ ಮತದಾನ ವಿಳಂಬವಾಗಿತ್ತು. ಮತದಾರರು ನಾಲ್ಕು ಗಂಟೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ. 

ಹಲವು ಮತದಾರರು 6 ಗಂಟೆಯ ಮೊದಲು ಮತಗಟ್ಟೆಗಳಿಗೆ ತಲುಪಿದ್ದರೂ ಅವರಿಗೆ ಮತದಾನ ಮಾಡಲು ಸಾಧ್ಯವಾಗಿಲ್ಲ ಎಂದು ಉಲ್ಲೇಖಿಸಿದ್ದಾರೆ.  ಕೆಲವು ಕಡೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದೂ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯು ತೃಪ್ತಿಕರವಾಗಿತ್ತು ಎಂದು ಮುಖ್ಯ ಚುನಾವಣಾ ಅಧಿಕಾರಿ ಹೇಳಿಕೆ ನೀಡಿದ ಮರುದಿನ ಸತೀಶನ್‌ ಅವರು ಈ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT