ಇಂಫಾಲ್: ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ಎರಡು ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದ ಘಟನೆಗಳು ವರದಿಯಾಗಿವೆ. ಆದರೆ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಮ್ನಾಪೊಕ್ವಿಯಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಮತಗಟ್ಟೆ ಬಳಿ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಮತದಾರರನ್ನು ಓಡಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಕರೆಸಲಾಯಿತು ಎಂದು ಅವರು ಹೇಳಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಉರಿಪೋಕ್ ಮತ್ತು ಇರೊಯಿಶೆಂಬಾದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ನಿರ್ದಿಷ್ಟ ರಾಜಕೀಯ ಪಕ್ಷದ ಚುನಾವಣಾ ಏಜೆಂಟರನ್ನು ಬೆದರಿಸಿ, ಮತಗಟ್ಟೆಗಳಿಂದ ಹೊರ ಹೋಗುವಂತೆ ಹೆದರಿಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಇರೊಯಿಶೆಂಬಾದಲ್ಲಿ ಮತಗಟ್ಟೆಗಳಲ್ಲಿನ ಚುನಾವಣಾ ಸಾಮಗ್ರಿಗಳು ಮತ್ತು ಸಲಕರಣೆಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. ಇಂಫಾಲ್ ಪೂರ್ವ ಜಿಲ್ಲೆಯ ಖೋಂಗ್‌ಮನ್ ವಲಯ 4ರಲ್ಲಿ ಮತದಾರರು ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ವಾಗ್ವಾದ ನಡೆದು, ಇವಿಎಂಗಳು ಹಾನಿಯಾಗಿವೆ. ಕೀರಾವೊ ವ್ಯಾಪ್ತಿಯ ಕಿಯಾಮ್‌ಗೆಯಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಖಾಲಿ ಗುಂಡುಗಳನ್ನು ಹಾರಿಸಿ, ಮತಗಟ್ಟೆಗಳಿಂದ ಕಾಂಗ್ರೆಸ್ ಏಜೆಂಟರನ್ನು ಬೆದರಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆಯರ ಸೆಳೆದ ಪಿಂಕ್ ಬೂತ್‌ಗಳು

ಜಮ್ಮು: ಜಮ್ಮು– ಕಾಶ್ಮೀರದ ಉಧಂಪುರ ಲೋಕಸಭಾ ಕ್ಷೇತ್ರದ ದೋಡಾ ಜಿಲ್ಲೆಯ ಪಿಂಕ್ ಬೂತ್‌ಗಳು ಹೆಚ್ಚಿನ ಸಂಖ್ಯೆಯ ಮಹಿಳಾ ಮತದಾರರನ್ನು ವಿಶೇಷವಾಗಿ ಮುಸ್ಲಿಂ ಮತದಾರರನ್ನು ಆಕರ್ಷಿಸಿದವು. ಧಾರಾಕಾರ ಮಳೆಯ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗಳಿಗೆ ಬಂದರು. ಉದ್ದನೆಯ ಸಾಲಿನಲ್ಲಿ ನಿಂತು ಮಹಿಳೆಯರು ಮತ ಚಲಾಯಿಸಿದರು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.