ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ

Published 18 ಮೇ 2024, 11:24 IST
Last Updated 18 ಮೇ 2024, 11:24 IST
ಅಕ್ಷರ ಗಾತ್ರ

ಕೋಲ್ಕತ್ತ: ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 200ರ ಗಡಿ ಸಹ ದಾಟುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.

ಅದೇ ವೇಳೆ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹೊರತುಪಡಿಸಿ ಬೇರೆ ಯಾವುದೇ ಪಕ್ಷಕ್ಕೆ ಮತ ಹಾಕಬಾರದು. ಇದರಿಂದ ಬಿಜೆಪಿಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಮಸಿ ಬಳಿಯಲು ಬಿಜೆಪಿ ಜೊತೆ ಕಾಂಗ್ರೆಸ್ ಹಾಗೂ ಸಿಪಿಐ(ಎಂ) ಹೊಂದಾಣಿಕೆ ಮಾಡಿಕೊಂಡಿವೆ ಎಂದು ಸಹ ಅವರು ಆರೋಪಿಸಿದ್ದಾರೆ.

ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಇಂಡಿಯಾ' ಹೆಸರನ್ನು ನಾನೇ ಸೂಚಿಸಿದ್ದೇನೆ. ರಾಷ್ಟ್ರೀಯ ಮಟ್ಟದಲ್ಲಿ ನಾವೆಲ್ಲರೂ ನಿರಂಕುಶ ನರೇಂದ್ರ ಮೋದಿ ಸರ್ಕಾರವನ್ನು ತಡೆಯಲು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂಡಿಯಾ ಮೈತ್ರಿಕೂಟವನ್ನು ಅಧಿಕಾರಕ್ಕೆ ತರುವಲ್ಲಿ ಟಿಎಂಸಿ ತನ್ನ ಪಾತ್ರವನ್ನು ನಿಭಾಯಿಸಲಿದೆ' ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಹಾಗೂ ಅಮಿತ್ ಶಾ, ಬಂಗಾಳ ವಿರೋಧಿ ನಿಲುವನ್ನು ಹೊಂದಿದ್ದು, ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT