ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

Published 27 ಏಪ್ರಿಲ್ 2024, 7:30 IST
Last Updated 27 ಏಪ್ರಿಲ್ 2024, 7:30 IST
ಅಕ್ಷರ ಗಾತ್ರ

ಪೋರ್‌ಬಂದರ್: ದೇಶದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ ಚಟುವಟಿಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನರೇಂದ್ರ ಮೋದಿ ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮನವಿ ಮಾಡಿದ್ದಾರೆ.

ಗುಜರಾತ್‌ನ ಪೋರ್‌ಬಂದರ್‌‌ನಲ್ಲಿ ಬಿಜೆಪಿಯ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಮುಂದಿನ ಅವಧಿಯಲ್ಲಿ ದೇಶದ ಆರ್ಥಿಕತೆ ಮೂರನೇ ಸ್ಥಾನಕ್ಕೆ ತಲುಪಲಿದೆ ಎಂದು ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ದೇಶದಲ್ಲಿ ಕೇವಲ ಏಳು ಏಮ್ಸ್ ಮಾತ್ರ ಇತ್ತು. ಬಿಜೆಪಿ ಅಧಿಕಾರದಲ್ಲಿ ಈ ಸಂಖ್ಯೆ 22ಕ್ಕೆ ಏರಿಕೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಎರಡು ಹಂತಗಳ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಅಮಿತ್ ಶಾ, ಎರಡು ಹಂತಗಳ ಮತದಾನದ ಬಳಿಕ ಜನಾದೇಶ ಬಿಜೆಪಿಯ ಪರವಾಗಿದೆ. ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಜನರು ನಿರ್ಧರಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT