ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಸುಲ್ತಾನ್‌ಪುರ: ಭಾರಿ ಗೆಲುವಿನ ನಿರೀಕ್ಷೆಯಲ್ಲಿ ಮೇನಕಾ

Published 19 ಮೇ 2024, 16:05 IST
Last Updated 19 ಮೇ 2024, 16:05 IST
ಅಕ್ಷರ ಗಾತ್ರ

ಸುಲ್ತಾನ್‌ಪುರ: ಈ ಬಾರಿಯ ಚುನಾವಣೆಯಲ್ಲಿ ಭಾರಿ ಮತಗಳ ಅಂತರದಲ್ಲಿ ಗೆಲ್ಲುವುದಾಗಿ ಉತ್ತರ ಪ್ರದೇಶದ ಸುಲ್ತಾನ್‌ಪುರ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಕಣಕ್ಕಿಳಿದಿರುವ ಬಿಜೆಪಿ ನಾಯಕಿ ಮೇನಕಾ ಗಾಂಧಿ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು.

ಪಿಲಿಭಿತ್‌ ಕ್ಷೇತ್ರದಿಂದ ಸ್ಪರ್ಧಿಸಲು ಪುತ್ರ ವರುಣ್‌ ಗಾಂಧಿ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ತಮ್ಮ ಪರವಾಗಿ ವರುಣ್‌, ಶೀಘ್ರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವುದಾಗಿ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದರು.

ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾತ್ರ ಕಾಳಜಿ ವಹಿಸುವುದಾಗಿ ಹೇಳಿದ ಅವರು, ರಾಯ್‌ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸುವಂತೆ ಬಿಜೆಪಿ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು.

2019ರ ಚುನಾವಣೆಯಲ್ಲಿ ಮೇನಕಾ ಅವರು ಈ ಕ್ಷೇತ್ರದಲ್ಲಿ 14,000 ಮತಗಳ ಅಂತರದಿಂದ ಗೆದ್ದಿದ್ದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿರುವುದರಿಂದ ಕ್ಷೇತ್ರದ ಜನರು ಖುಷಿಯಾಗಿದ್ದಾರೆ ಎಂದೂ ಅವರು ತಿಳಿಸಿದರು.

ಮೇನಕಾ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಸಮಾಜವಾದಿ ಪಕ್ಷವು ರಾಮ್‌ ಭೂಲ್‌ ನಿಶಾದ್‌ ಅವರನ್ನು ಹಾಗೂ ಬಿಎಸ್‌ಪಿಯು ಉದರಾಜ್‌ ವರ್ಮಾ ಅವರನ್ನು ಕಣಕ್ಕಿಳಿವೆ.

ಈ ಬಾರಿ ಮೇನಕಾ ಗಾಂಧಿ ಅವರು ಎರಡು ಲಕ್ಷ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆಂಬ ವಿಶ್ವಾಸದಲ್ಲಿ ಬಿಜೆಪಿ ಮುಖಂಡರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT