ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಓಲೈಕೆ ಸಂಸ್ಕೃತಿಗೆ ಅಂತ್ಯ ಹಾಡಿದ ಮೋದಿ: ಜಿತೇಂದ್ರ ಸಿಂಗ್‌

Published 28 ಮೇ 2024, 13:53 IST
Last Updated 28 ಮೇ 2024, 13:53 IST
ಅಕ್ಷರ ಗಾತ್ರ

ನವದೆಹಲಿ: ವಿರೋಧ ಪಕ್ಷಗಳ ಆಡಳಿತಾವಧಿಯಲ್ಲಿ ಮುನ್ನೆಲೆಗೆ ಬಂದಿದ್ದ ಓಲೈಕೆ ಸಂಸ್ಕೃತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತ್ಯ ಹಾಡಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಮಂಗಳವಾರ ಹೇಳಿದರು.

‘ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾತಿ ಮತ್ತು ಧರ್ಮವನ್ನು ಪರಿಗಣಿಸದೆ ಜನರ ಏಳಿಗೆಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದು ಪ್ರತಿಪಾದಿಸಿದರು.

‘ಅಲ್ಪಸಂಖ್ಯಾತರು ಹಾಗೂ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ಜನರು ಕೂಡ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ’ ಎಂದು ಹೇಳಿದರು.

‘ಮತಬ್ಯಾಂಕ್ ರಾಜಕೀಯದಲ್ಲಿ ಮೋದಿ ಅವರಿಗೆ ವಿಶ್ವಾಸವಿಲ್ಲ, ಅವರ ಗುರಿ ಎಲ್ಲರ ಅಭಿವೃದ್ಧಿ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT