ಬಿಜೆಡಿ ಪ್ರಧಾನ ಕಾರ್ಯದರ್ಶಿ ಪ್ರಣವ್ ಪ್ರಕಾಶ್ ದಾಸ್ ಅವರು ಸಂಬಲ್‌ಪುರ ಕ್ಷೇತ್ರದಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ಧರ್ಮೇಂದ್ರ ಪ್ರಧಾನ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಭಾರತ ಹಾಕಿ ತಂಡದ ಮಾಜಿ ಆಟಗಾರ ದಿಲೀಪ್ ಟಿರ್ಕಿ ಸುಂದರ್‌ಗಢ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಜುಯಲ್ ಓರಂ ಅವರನ್ನು ಎದುರಿಸಲಿದ್ದಾರೆ.