ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌: ಇಂದಿರಾ ಹತ್ಯೆಕೋರನ ಮಗ ಮತ್ತೆ ಚುನಾವಣಾ ಕಣಕ್ಕೆ

Published 11 ಏಪ್ರಿಲ್ 2024, 23:10 IST
Last Updated 11 ಏಪ್ರಿಲ್ 2024, 23:10 IST
ಅಕ್ಷರ ಗಾತ್ರ

ಚಂಡೀಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಕೋರ ಬಿಯಾಂತ್ ಸಿಂಗ್ ಪುತ್ರ ಸರಬ್‌ಜಿತ್ ಸಿಂಗ್ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಫರೀದ್‌ಕೋಟದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಗುರುವಾರ ತಿಳಿಸಿದ್ದಾರೆ. 

2004ರ ಲೋಕಸಭಾ ಚುನಾವಣೆಯಲ್ಲಿ ಭಟಿಂಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಂಗ್ 1.13 ಲಕ್ಷ ಮತ ಪಡೆದಿದ್ದರು. 2014ರಲ್ಲೂ ಅವರು ಫತೇಹ್‌ಗಢ ಸಾಹೀಬ್ ಕ್ಷೇತ್ರದಲ್ಲಿ ಪರಾಜಿತಗೊಂಡಿದ್ದರು. 2007ರಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.   

ಸರಬ್‌ಜಿತ್ ಅವರ ತಾಯಿ ಬಿಮಾಲ್ ಕೌರ್ 1989ರಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT