ಅಹಮದಾಬಾದ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್ ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು 40 ಸ್ಟಾರ್ ಪ್ರಚಾರಕರ ಹೆಸರುಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್, ಶಾಸಕ ಸಚಿನ್ ಪೈಲಟ್ ಅವರ ಹೆಸರುಗಳಿರುವ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ಘಟಕ ಮಂಗಳವಾರ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಶಕ್ತಿ ಸಿನ್ಹಾ ಗೋಹಿಲ್, ಜಗದೀಶ ಠಾಕೂರ್, ಸಿದ್ಧಾರ್ಥ್ ಪಟೇಲ್, ಶಾಸಕರಾದ ಅಮಿತ್ ಚಾವ್ಡಾ, ಮೇವಾನಿ ಮತ್ತು ಶೈಲೇಶ್ ಪರ್ಮಾರ್ ಸೇರಿದಂತೆ 40 ಜನರು ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಮೇ 7ರಂದು ಗುಜರಾತ್ ರಾಜ್ಯದ ಎಲ್ಲಾ 26 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.