ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ | ಸಿಪಿಐ(ಎಂ)ನಿಂದ ಚುನಾವಣೆ ಹೈಜಾಕ್: ಕಾಂಗ್ರೆಸ್ ಆರೋಪ

Published 27 ಏಪ್ರಿಲ್ 2024, 5:49 IST
Last Updated 27 ಏಪ್ರಿಲ್ 2024, 5:49 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಲೋಕಸಭೆ ಚುನಾವಣೆಯನ್ನು ಸಿಪಿಐ(ಎಂ) ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಆಡಳಿತಾರೂಢ ಸಿಪಿಐ(ಎಂ) ಮತಯಂತ್ರವನ್ನು ಹೈಜಾಕ್ ಮಾಡಿರುವುದು 2019ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸರಾಸರಿ ಮತದಾನ ಕಡಿಮೆಯಾಗಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಕೇರಳದ ಆಲಪ್ಪುಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವೇಣುಗೋಪಾಲ್, ಮತಗಟ್ಟೆಗಳಲ್ಲಿ ಮತದಾರರಿಗೆ ಅಧಿಕಾರಿಗಳಿಂದಲೂ ತೊಂದರೆ ಎದುರಾಗಿದೆ ಎಂದೂ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಶೇ 3ರಿಂದ 5ರಷ್ಟು ಮತಗಟ್ಟೆಗಳಲ್ಲಿ ಇವಿಎಂ ದೋಷ ಕಾಣಿಸಿಕೊಂಡಿದ್ದು, ಇದರಿಂದಾಗಿ ಮತದಾನ ವಿಳಂಬಕ್ಕೆ ಕಾರಣವಾಯಿತು. ಮತದಾರರು ಬಿಸಿಲಿನಲ್ಲಿ ಗಂಟೆಗಟ್ಟಲೇ ಕಾಯಬೇಕಾಯಿತು. ಕುಡಿಯಲು ನೀರಿಲ್ಲದೆ ತೊಂದರೆ ಅನುಭವಿಸಿದರು. ಯುಡಿಎಫ್ ಪ್ರಬಲವಾಗಿರುವ ಮತಗಟ್ಟೆಗಳಲ್ಲಿ ಶೇ 90ರಷ್ಟು ಇವಿಎಂ ದೋಷಗಳು ಕಾಣಿಸಿಕೊಂಡಿವೆ ಎಂದು ಅವರು ಹೇಳಿದ್ದಾರೆ.

ಸಿದ್ಧತೆಗೆ ಸಾಕಷ್ಟು ಸಮಯ ಇದ್ದರೂ ಮತದಾನದಲ್ಲಿ ಅವ್ಯವಸ್ಥೆ ಮಾಡಲಾಗಿದೆ ಎಂದು ಅವರು ಟೀಕಿಸಿದ್ದಾರೆ.

ಕೇರಳದ 20 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ಪೂರ್ಣಗೊಂಡಿದ್ದು, ಅರ್ಹ ಮತದಾರರಲ್ಲಿ ಸರಾಸರಿ ಶೇ 70.22ರಷ್ಟು ಮಂದಿ ಹಕ್ಕು ಚಲಾಯಿಸಿದ್ದಾರೆ. ಅಲ್ಲಲ್ಲಿ ನಕಲಿ ಮತದಾನದ ಆರೋಪಗಳು ಕೇಳಿ ಬಂದಿದ್ದವು. 2019ರ ಲೋಕಸಭಾ ಚುನಾವಣೆಯಲ್ಲಿ ಶೇ 77.84ರಷ್ಟು ಮತದಾನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT