ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಎಂಎನ್‌ಎಸ್‌ ನಾಯಕ ರಾಜ್‌ ಠಾಕ್ರೆ

Published 19 ಮಾರ್ಚ್ 2024, 10:04 IST
Last Updated 19 ಮಾರ್ಚ್ 2024, 10:04 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್‌ಎಸ್‌) ಪಕ್ಷದ ನಾಯಕ ರಾಜ್‌ ಠಾಕ್ರೆ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಇಂದು( ಮಂಗಳವಾರ) ಭೇಟಿ ಮಾಡಿ ಮೈತ್ರಿ ಸಂಬಂಧ ಮಾತುಕತೆ ನಡೆಸಿದ್ದಾರೆ.

ದೆಹಲಿಗೆ ಆಗಮಿಸಿದ ಠಾಕ್ರೆ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಸಹ ಜತೆಗಿದ್ದರು. ಒಂದು ವೇಳೆ ಮೈತ್ರಿ ಏರ್ಪಟ್ಟರೆ ಮುಂಬೈನಿಂದ ಸ್ಪರ್ಧಿಸಲು ಎಂಎನ್‌ಎಸ್‌ಗೆ ಒಂದು ಸ್ಥಾನವನ್ನು ನೀಡಬಹುದು ಎನ್ನಲಾಗಿದೆ.

ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ರಾಜ್ ಠಾಕ್ರೆ ಅವರು ಶಿವಸೇನೆಯಿಂದ ಹೊರಬಂದು ಎಂಎನ್‌ಎಸ್‌ ಪಕ್ಷ ಸ್ಥಾಪಿಸಿದರು. ಬಳಿಕ ಅವರು ರಾಜಕೀಯವಾಗಿ ಪ್ರಭಾವ ಬೀರುವಲ್ಲಿ ವಿಫಲರಾದರು.

ಉತ್ತರ ಭಾರತೀಯರ ವಿರುದ್ಧ ರಾಜ್ ಠಾಕ್ರೆ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT