ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಂದು ಸಭೆ ಸೇರಿ ಮೋದಿಯನ್ನು ತಮ್ಮ ನಾಯಕನಾಗಿ ಆಯ್ಕೆ ಮಾಡಲಿರುವ ಎನ್‌ಡಿಎ ಸಂಸದರು

Published 7 ಜೂನ್ 2024, 3:30 IST
Last Updated 7 ಜೂನ್ 2024, 3:30 IST
ಅಕ್ಷರ ಗಾತ್ರ

ನವದೆಹಲಿ: ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದರು ಇಂದು ಸಭೆ ಸೇರಿ ನರೇಂದ್ರ ಮೋದಿಯನ್ನು ತಮ್ಮ ನಾಯಕನೆಂದು ಆಯ್ಕೆ ಮಾಡಲಿದ್ದಾರೆ. ಆ ಮೂಲಕ 3ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮೋದಿಯ ಹಾದಿ ಸುಗಮವಾಗಲಿದೆ.

ಎನ್‌ಡಿಎ ನಾಯಕರಾಗಿ ಮೋದಿ ಆಯ್ಕೆ ಬಳಿಕ ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್. ಚಂದ್ರಬಾಬು ನಾಯ್ಡು, ಜೆಡಿಯುನ ನಿತೀಶ್ ಕುಮಾರ್ ಮತ್ತು ಶಿವಸೇನಾ ನಾಯಕ ಏಕನಾಥ ಶಿಂದೆ ಅವರ ಜೊತೆಗೆ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ತಮಗೆ ಬೆಂಬಲ ನೀಡಿರುವ ಸಂಸದರ ಪಟ್ಟಿಯನ್ನು ಸಲ್ಲಿಸಲಿದ್ದಾರೆ ಎಂದು ಎನ್‌ಡಿಎ ಮಿತ್ರ ಪಕ್ಷಗಳ ಸದಸ್ಯರು ಹೇಳಿದ್ದಾರೆ.

ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭ ಭಾನುವಾರ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎಯ 293 ಸದಸ್ಯರಿದ್ದಾರೆ. ಬಹುಮತಕ್ಕೆ 272 ಸ್ಥಾನಗಳ ಅಗತ್ಯವಿತ್ತು.

ಸರ್ಕಾರದ ಉಳಿವಿಗೆ ಅತ್ಯಂತ ಪ್ರಮುಖವಾಗಿರುವ ಮಿತ್ರ ಪಕ್ಷಗಳ ಜೊತೆ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ. ನಡ್ಡಾ ಸಹ ಸಭೆಗಳನ್ನು ನಡೆಸಿದ್ದಾರೆ.

ಜೂನ್ 4ರಂದು ಫಲಿತಾಂಶ ಬಂದ ಕೂಡಲೇ ಯಾವುದೇ ಗೊಂದಲಕ್ಕೆ ಅವಕಾಶ ಕೊಡದೆ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT