ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ‍ಪ್ರತಿ ಮೂಲೆಯಲ್ಲಿ ಪ್ರೀತಿಯ ಅಂಗಡಿ ತೆರೆಯಿರಿ: ಮತದಾರರಿಗೆ ರಾಹುಲ್ ಕರೆ

Published 19 ಏಪ್ರಿಲ್ 2024, 3:29 IST
Last Updated 19 ಏಪ್ರಿಲ್ 2024, 3:29 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದೇಶದ ಪ್ರತಿ ಮೂಲೆಯಲ್ಲಿ ದ್ವೇಷವನ್ನು ಸೋಲಿಸಿ, ಪ್ರೀತಿಯ ಅಂಗಡಿಯನ್ನು ತೆರೆಯುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಇಂದು ಮೊದಲ ಹಂತದ ಮತದಾನ. ನೆನಪಿಡಿ, ನಿಮ್ಮ ಪ್ರತಿಯೊಂದು ಮತವೂ ಭಾರತದ ಪ್ರಜಾತಂತ್ರದ ಹಾಗೂ ಮುಂದಿನ ಪೀಳಿಗೆಯ ಭವಿಷ್ಯವನ್ನು ನಿರ್ಧರಿಸಲಿದೆ. ಕಳೆದ 10 ವರ್ಷಗಳಲ್ಲಿ ದೇಶದ ಆತ್ಮಕ್ಕೆ ಆಗಿರುವ ಗಾಯಗಳಿಗೆ ನಿಮ್ಮ ಮತದ ಬಾಮ್ ಹಚ್ಚಿ ಪ್ರಜಾಪ್ರಭುತ್ವವನ್ನು ಬಲಪಡಿಸಿ’ ಎಂದು ಬರೆದುಕೊಂಡಿದ್ದಾರೆ.

ದೇಶದ ‍ಪ್ರತಿಯೊಂದು ಮೂಲೆಯಲ್ಲಿ ದ್ವೇಷವನ್ನು ಸೋಲಿಸಿ ಪ್ರೀತಿಯ ಅಂಗಡಿ ತೆರೆಯಿರಿ ಎಂದು ಅವರು ಹೇಳಿದ್ದಾರೆ.

ಅಪ್ರೆಂಟಿಸ್‌ ಹಕ್ಕು, ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ, ರಾಷ್ಟ್ರವ್ಯಾಪಿ ಜಾತಿಗಣತಿ ಸೇರಿದಂತೆ ಕಾಂಗ್ರೆಸ್ ಗ್ಯಾರಂಟಿಗಳ ಗ್ರಾಫಿಕ್ಸ್ ಚಿತ್ರವನ್ನೂ ಅವರು ಹಂಚಿಕೊಂಡಿದ್ದಾರೆ.

ಮೊದಲ ಹಂತದಲ್ಲಿ 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT