ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿಂದೂ ಹೃದಯ ಸಾಮ್ರಾಟ’ನ ವರ್ಚಸ್ಸಿಗೆ ಮೋದಿ ಯತ್ನ: ತರೂರ್‌

Published 3 ಮೇ 2024, 16:21 IST
Last Updated 3 ಮೇ 2024, 16:21 IST
ಅಕ್ಷರ ಗಾತ್ರ

ಪಣಜಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಹಿಂದೂ ಹೃದಯ ಸಾಮ್ರಾಟ’ನ ವರ್ಚಸ್ಸನ್ನು ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ಶುಕ್ರವಾರ ಹೇಳಿದರು.

ಮೊದಲ ಎರಡು ಹಂತದ ಮತದಾನದಲ್ಲಿ ನಿರ್ದಿಷ್ಟ ಪ್ರದೇಶಗಳಲ್ಲಿ ಮತದಾನದ ಶೇಕಡಾವಾರು ಕುಸಿದಿರುವುದು, ಬಿಜೆಪಿಯ ಬಗ್ಗೆ ಜನರಿಗಿರುವ ಉದಾಸೀನತೆಗೆ ಸಾಕ್ಷಿಯಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಗುಜರಾತ್‌ ಮಾದರಿ ಅಭಿವೃದ್ಧಿ, ಭ್ರಷ್ಟಾಚಾರ ವಿರೋಧಿ ನಿಲುವನ್ನು ಮುಂದಿರಿಸಿ 2014ರಲ್ಲಿ ಮೋದಿ ಅವರು ಅಧಿಕಾರಕ್ಕೆ ಬಂದಿದ್ದರು. ಮೊದಲ ಅವಧಿ ಕಳೆದಾಗ ಇವುಗಳಿಗೆ ಪ್ರಸಕ್ತಿ ಇಲ್ಲದಾಯಿತು. 2019ರಲ್ಲಿ ಪುಲ್ವಾಮಾ ದಾಳಿಯನ್ನು ಮುಂದಿರಿಸಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT