ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪ್ರಣಾಳಿಕೆಯ ನಿಜವಾದ ಅಂಶಗಳ ಬಗ್ಗೆ ಚರ್ಚಿಸಲಿ: ಚಿದಂಬರಂ

Published 28 ಏಪ್ರಿಲ್ 2024, 13:46 IST
Last Updated 28 ಏಪ್ರಿಲ್ 2024, 13:46 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಭಾಷಣ ಬರೆಯುವವರೊಬ್ಬರು ಬರೆದ ಕಾಂಗ್ರೆಸ್ ಪ್ರಣಾಳಿಕೆ ಕಲ್ಪಿಸಿಕೊಂಡಿದ್ದಾರೆ. ಅವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ನಿಜವಾದ ಅಂಶಗಳ ಬಗ್ಗೆ ಚರ್ಚೆ ನಡೆಸಲಿ ಎಂದು ಪಕ್ಷದ ನಾಯಕ ಪಿ.ಚಿದಂಬರಂ ಭಾನುವಾರ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಆಸ್ತಿ ಹಂಚಿಕೆ ಮತ್ತು ಪಿತ್ರಾರ್ಜಿತ ಆಸ್ತಿ ತೆರಿಗೆಗೆ ಸಂಬಂಧಿಸಿದ ಕಾಂಗ್ರೆಸ್ ಪ್ರಣಾಳಿಕೆಯನ್ನು ಟೀಕಿಸಿದ ಬಗ್ಗೆ ಚಿದಂಬರಂ ‘ಎಕ್ಸ್‌’ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಅವರು ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು.

‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ಪದಗಳನ್ನು, ವಾಕ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಕಂಡುಹಿಡಿಯುತ್ತಿದ್ದಾರೆ. ಪಿತ್ರಾರ್ಜಿತ ಆಸ್ತಿ ತೆರಿಗೆ ಎನ್ನುವ ಪದ ಪ್ರಣಾಳಿಕೆಯಲ್ಲಿ ಎಲ್ಲೂ ಇಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT