ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮತ್ತೆ ಪ್ರಧಾನಿಯಾಗುವ ನಂಬಿಕೆ ಜಗತ್ತಿಗಿದೆ: ರಾಜನಾಥ್‌ ಸಿಂಗ್‌

Published 14 ಏಪ್ರಿಲ್ 2024, 23:30 IST
Last Updated 14 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಜಮುಯಿ/ಬಂಕಾ: ಪ್ರಧಾನಿ ನರೇಂದ್ರ ಮೋದಿ ಅವರೇ ಮೂರನೇ ಬಾರಿಯೂ ಪ್ರಧಾನಿಯಾಗುತ್ತಾರೆ ಎಂಬ ನಂಬಿಕೆ ಜಗತ್ತಿಗಿದೆ. ಈ ವರ್ಷದ ಅಕ್ಟೋಬರ್‌ನಲ್ಲಿ ಮತ್ತು ಮುಂದಿನ ವರ್ಷ ವಿದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅವರನ್ನು ಈಗಾಗಲೇ ಆಹ್ವಾನಿಸಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾನುವಾರ ಹೇಳಿದರು.

ಲೋಕ ಜನಶಕ್ತಿ ಪಕ್ಷ ಮತ್ತು ಜೆಡಿಯುನ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಆಡಳಿತದಲ್ಲಿ, ನಿರ್ದಿಷ್ಟ ದಾಳಿಯ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸುವ ಶಕ್ತಿಯಾಗಿ ಭಾರತವು ರೂಪುಗೊಂಡಿದೆ ಎಂದರು.

ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆಗೊಳಿಸಿರುವುದು ಭಾರತವು ಜಾಗತಿಕ ಶಕ್ತಿಯಾಗಿ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT