ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls: ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ

Published 7 ಮೇ 2024, 3:20 IST
Last Updated 7 ಮೇ 2024, 3:20 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು.

ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ, ಮತದಾರರಿಗೆ ಕರೆ ನೀಡಿದ್ದಾರೆ. ಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ ಎಂದು ಹೇಳಿದ್ದಾರೆ.

ಎಕ್ಸ್‌ ಖಾತೆಯಲ್ಲೂ ಪ್ರಧಾನಿ ಮೋದಿ, ಬೆಂಗಾಳಿ, ಅಸ್ಸಾಮಿ, ಕನ್ನಡ, ಗುಜರಾತಿ, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.120 ಮಹಿಳೆಯರು ಸೇರಿದಂತೆ 1,300ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗೃಹ ಸಚಿವ ಅಮಿತ್‌ ಶಾ (ಗಾಂಧಿನಗರ) ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (ಗುನಾ) ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.

8.39 ಕೋಟಿ ಮಹಿಳಾ ಮತದಾರರು ಸೇರಿ 17.24 ಕೋಟಿ ಮತದಾರರು 3ನೇ ಹಂತದಲ್ಲಿ ಮತದಾನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT