ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಕಾಶ್ಮೀರದಲ್ಲಿ ದಾಖಲೆಯ ಮತದಾನ: ಪ್ರಧಾನಿ ಮೋದಿ ವಿಶೇಷ ಅಭಿನಂದನೆ

Published 27 ಮೇ 2024, 3:22 IST
Last Updated 27 ಮೇ 2024, 3:22 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಅನಂತ್‌ನಾಗ್‌– ರಜೌರಿ ಜಿಲ್ಲೆಯ ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಮತದಾನ ಮಾಡಿದ್ದಕ್ಕಾಗಿ ಅನಂತ್‌ನಾಗ್-ರಜೌರಿಯ ನನ್ನ ಸಹೋದರಿಯರು ಮತ್ತು ಸಹೋದರರಿಗೆ ವಿಶೇಷ ಅಭಿನಂದನೆಗಳು. ಅವರು ಉತ್ಸಾಹದಿಂದ ಭಾಗವಹಿಸಿರುವುದು ಪ್ರಜಾಪ್ರಭುತ್ವದ ರೋಮಾಂಚಕ ಮನೋಭಾವಕ್ಕೆ ಸಾಕ್ಷಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಅನಂತ್‌ನಾಗ್‌–ರಜೌರಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ಮೇ 25 ರಂದು ಮತದಾನ ನಡೆದಿದ್ದು, ಶೇ 54.84 ರಷ್ಟು ಮತದಾನವಾಗಿದೆ.

ಕಳೆದ ಕೆಲವು ದಶಕಗಳಿಂದ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಜನತೆ ಚುನಾವಣೆಗೆ ಹೆಚ್ಚಿನ ಒತ್ತು ನೀಡುವುದಾಗಲೀ ಅಥವ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳುವುದಾಗಲೀ ಮಾಡುತ್ತಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT